ಚಿತ್ತಾಪುರ; ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಅವರ ನೇತೃತ್ವದಲ್ಲಿ ಸರ್ಕಾರಿ ನೌಕರರು ಚಿತ್ತಾಪುರ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿ ಅವರು, ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು.
ಎನ್.ಪಿ.ಎಸ್ ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡೇರಿಸಬೇಕೆಂದು ಎಂದು ಆಗ್ರಹಿಸಿದರು.
ನಂತರ ತಹಶಿಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಸಪ್ಪ ಯಂಬತ್ನಾಳ್, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…