ಚಿತ್ತಾಪುರ; ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಚಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸ್‌ರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ ವಸ್ತುಗಳು ಪೋಲಿಸ್‌ರು ವಶಪಡಿಸಿಕೊಂಡಿದ್ದಾರೆ.
ಕಳೆದ ಜೂನ್ 28ರಂದು ಗ್ರಾಮದ ಮಲ್ಲಪ್ಪ ಮಾಂಗ್ ಎಂಬುವರ ಮನೆ ಕಳ್ಳತನವಾಗಿತ್ತು. ಮೇಲ್ಚಾವಣೆ ಕಿತ್ತು 45 ಗ್ರಾಂ ಚಿನ್ನ ಹಾಗೂ 5 ಸಾವಿರ ರೂ.ಗಳ ನಗದು ಕಳ್ಳರು ದೋಚಿದ್ದರು. ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಅಪರ ಪೋಲಿಸ್ ಅಧೀಕ್ಷಕ ಎನ್ ಶ್ರೀನಿಧಿ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್ ತಿಗಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡರು.
ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ, ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಬಸವರಾಜ್, ಸವಿಕುಮಾರ್, ಅಯ್ಯಣ್ಣ, ಬಸವರಾಜ್, ಸಿದ್ದರಾಮೇಶ್, ಈರೇಶ್, ಮಂಜುನಾಥ್ ಅವರನ್ನೊಳಗೊಂಡ ತಂಡವನ್ನು ರಚಿಸಿ ಆರೋಪಿ ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬುವನಿಗೆ ಬಂಧಿಸಿ ಒಟ್ಟು 1,30,000 ರೂ.ಗಳ ಮೌಲ್ಯದ ಚಿನ್ನದ ಆಭರಣಗಳು ಜಪ್ತಿಪಡಿಸಿಕೊಂಡು ಆರೋಪಿತನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…