ಬಿಸಿ ಬಿಸಿ ಸುದ್ದಿ

ಜುಲೈ 30ಕ್ಕೆ ಕಲಬುರಗಿ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ

ಕಲಬುರಗಿ: 55 ವಾರ್ಡಗಳು ಹೊಂದಿರುವ ಕಲಬುರಗಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸೇರಿ ನಾಲ್ಕು ಸ್ಥಾಯಿ ಸಮಿತಿಗಳ ಆಯ್ಕೆಗೆ ಜುಲೈ 30 ರಂದು ಚುನಾವಣೆ ಘೋಷಣೆ ಮಾಡಿ ಕಲಬುರಗಿ ಪ್ರದೇಶಿಕ ಆಯುಕ್ತರು ತಿಳುವಳಿಕೆ ಪತ್ರ ಹೊರಡಿಸಿದ್ದಾರೆ.

ಮೇಯರ್ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಮೇಯರ್ ಹುದ್ದೆ ಬಿಸಿಎ ವರ್ಗಕ್ಕೆ ಮೀಸಲಾಗಿದೆ. ಜುಲೈ 30 ರಂದು ಬೆಳಿಗ್ಗೆ 10:30ರೊಳಗೆ ಅಪಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಂದು 12 ಗಂಟೆಗೆ ನಗರದ ಟೌನ್ ಹಾಲ್ ನಲ್ಲಿ ಸದಸ್ಯರ ಹಾಜರಾತಿ ಪಡೆದು 12;30ರ ನಂತರ ನಾಮಪತ್ರ ಪರಿಶೀಲನೆ, ನಾಮಪತ್ರ ಮರಳಿ ಪಡೆಯಲು ಕಾಲಾವಕಾಶ ಹಾಗೂ ಅವಶ್ಯವಿದಲ್ಲಿ ಮತದಾನದ ಬಳಿಕ 6 ಸ್ಥಾನಗಳ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ಸಂಖ್ಯೆ ಬಲ: ಬಿಜೆಪಿಯ 22 ಪಾಲಿಕೆ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರು ಒಳಗೊಂಡಂತೆ 4 ಜನಪ್ರತಿನಿಧಿಗಳು ಮತ್ತು ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ 4 ಪಾಲಿಕೆ ಸದಸ್ಯರ ಸಂಖ್ಯೆ ಸೇರಿ 30 ಸಂಖ್ಯೆ ಬಲ ಇದೆ. ಕಾಂಗ್ರೆಸ್ ನ 27 ಸದಸ್ಯರು ಮತ್ತು ಶಾಸಕರು, ಸಂಸದರು, ಹಾಗೂ ವಿಧಾನ ಪರಿಷತ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಒಳಗೊಂಡಂತೆ 6 ಜನಪ್ರತಿನಿಧಿಗಳು ಸೇರಿ 33 ಸಂಖ್ಯೆ ಬಲ ಹೊಂದಿದೆ.

ಕಾಂಗ್ರೆಸ್ ನ 27 ಪಾಲಿಕೆ ಸದಸ್ಯರು ಮತ್ತು ಪಕ್ಷದ ಜನಪ್ರತಿನಿಧಿಗಳಾದ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಡಾ. ಚಂದ್ರಶೇಖರ್ ಪಾಟೀಲ್ ಹುಮನಾಬಾದ್ ಮತದಾನ ಮಾಡಬಹುದಾಗಿದ್ದು, ಬಿಜೆಪಿಯ 22 ಪಾಲಿಕೆಯ ಸದಸ್ಯರು ಮತ್ತು ಪಕ್ಷದ ಶಾಸಕ ಬಸವರಾಜ ಮತ್ತಿಮುಡ್, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಸುನೀಲ್ ವಲ್ಲ್ಯಾಪುರೆ, ಬಿ.ಜಿ. ಪಾಟೀಲ ಮತದಾನದ ಅಧಿಕಾರ ಹೊಂದಿದ್ದಾರೆ.

ಸದಸ್ಯತ್ವವಿದ್ದರೂ ವಾರ್ಡ್ ಸದಸ್ಯ ಶಂಬುಲಿಂಗ ಬಳಬಟ್ಟಿಗೆ ಮತದಾನದ ಹಕ್ಕು ಇಲ್ಲ. 24ನೇ ವಾರ್ಡ್‌ನ ಪ್ರಿಯಾಂಕಾ ಭೋವಿ ಸದಸ್ಯತ್ವಕ್ಕೆ ತಡೆಯಾಜ್ಞೆ ಇರುವುದರಿಂದ ಮತದಾನ ಮಾಡುವಂತಿಲ್ಲ ಎಂದು ತಿಳಿದುಬಂದಿದೆ.

ಮೇಯರ್ ವಿಶಾಲ ದರ್ಗಿ ಮತ್ತು ಉಪಮೇಯರ್ ಶಿವಾನಂದ ಪಿಸ್ತಿ ಅವರ ಅಧಿಕಾರಾವಧಿಯು ಮಾರ್ಚ್ 23, 2023 ರಂದು ಕೊನೆಗೊಂಡಿದ್ದು, ನಗರದ ‘ಪ್ರಥಮ ಪ್ರಜೆ’ ಚುನಾವಣೆಗೆ ‘ಕಾಂಗ್ರೆಸ್’ ಮತ್ತು ‘ಬಿಜೆಪಿ’ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago