ಬಿಸಿ ಬಿಸಿ ಸುದ್ದಿ

ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಕಠಿಣ ಕ್ರಮ:ಡಿವೈಎಸ್.ಪಿ ಎಚ್ಚರಿಕೆ

ವಾಡಿ; ಮೊಹರಂ ಹಬ್ಬವು ಅಸಂಖ್ಯಾತ ಹಿಂದೂ–ಮುಸ್ಲಿಮ್‌ ರ ಸೌಹಾರ್ದತೆಯ ಸಂಕೇತವಾಗಿದೆ. ಯಾವುದೇ ಕ್ಷುಲ್ಲಕ ವಿಷಯ, ಹಳೆವೈಷಮ್ಯದ ಕಾರಣದಿಂದ ಹಿಂಸಾಚಾರಕ್ಕೆ ಉತ್ತೇಜನ ನೀಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಜರುಗಿಸಲಾಗುವುದು. ಎಂದು ಶಹಾಬಾದ್ ಪೊಲೀಸ್ ವಿಭಾಗದ ಡಿವೈಎಸ್.ಪಿ ಶಂಕರಗೌಡ ಪಾಟೀಲ ಹೇಳಿದರು.

ಪಟ್ಟಣ ಸಮೀಪದ ಇಂಗಳಗಿ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಆಯೋಜಿಸಿದ ಕಾನೂನು ಅರಿವು ಮತ್ತು ಸಾರ್ವಜನಿಕ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಹಬ್ಬಗಳು ಭಾವೈಕ್ಯತೆಯ ಸಂಕೇತವಾಗಿವೆ. ಯಾವುದೇ ಜಾತಿ, ಧರ್ಮ ಎನ್ನದೇ ಎಲ್ಲರೂ ಸೇರಿ ಸಮಸ್ಯೆಯಾಗದಂತೆ ಹಬ್ಬ ಆಚರಿಸಬೇಕು. ಕೋಮು ಗಲಾಭೆಗೆ ಅವಕಾಶ ನೀಡಬಾರದು ಎಂದು ಗ್ರಾಮಸ್ಥರಿಗೆ ಸಲಹೆ ನೀಡಿದರು.

ಅಕ್ರಮ ಗಾಂಜಾ ದಂಧೆಗೆ ತಡೆ; ಶಾಲೆ ಕಾಲೇಜು ಬಳಿ ಹುಡುಗಿಯರನ್ನು ರೇಗಿಸುವ ಕಿಡಿಗೇಡಿಗಳ ಮತ್ತು ಗಾಂಜಾ ಮಾರಾಟಕ್ಕೆ ಕಡಿವಾಣ ಹಾಗೂ ಗ್ರಾಮೀಣ ಭಾಗದ ಸಾಕು ಪ್ರಾಣಿಗಳ ಕಳವು ನಿಯಂತ್ರಣಕ್ಕೆ ಗಸ್ತು ವ್ಯವಸ್ಥೆ ಹೆಚ್ಚಿಸಲಾಗಿದೆ. ತುರ್ತು ಸಂದರ್ಭದಲ್ಲಿ ಸಹಾಯವಾಣಿ 112 ಸಂಖ್ಯೆಗೆ ಕರೆಮಾಡಿದರೆ ಪೊಲೀಸ್‌ ಸಿಬ್ಬಂದಿ ಸ್ಪಂದಿ ತಕ್ಷಣ ಸ್ಪಂದಿಸುತ್ತಾರೆ. ಅನೈತಿಕ ಮತ್ತು ಅಕ್ರಮ ಚಟುವಟಿಕೆಗಳ ಮಾಹಿತಿ ನೀಡಿ ಗೋಪ್ಯತೆ ಇರಲಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯ ಆಡಳಿತ ಹಾಗೂ ಸಾರ್ವಜನಿಕರೇ ಮುಂದಾಗಬೇಕು ಎಂದು ಸರ್ಕಲ್ ಇನ್ಸ್.ಪೆಕ್ಟರ್ ಚಂದ್ರಶೇಖರ ತಿಗಡಿ ಹೇಳಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಅತಿ ಸೂಕ್ಷ್ಮ ಇರುವ ಗ್ರಾಮಗಳಲ್ಲಿ ವಿವಿಧ ರೀತಿಯ ಅಪರಾಧಗಳ ಕುರಿತು ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು, ಸಾರ್ವಜನಿಕ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ಇದರಲ್ಲಿ ಡಿವೈಎಸ್.ಪಿ ಸೇರಿದಂತೆ ಇಡೀ ಆಯಾ ಭಾಗದ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸುತ್ತಾರೆ. ಯಾವುದೇ ಸಮಸ್ಯೆ ಇದ್ದರೇ ಸ್ಥಳದಲ್ಲೇ ಬಗೆಹರಿಸಲಾಗುತ್ತದೆ ಎಂದು ಶಂಕರಗೌಡ ಪಾಟೀಲ ತಿಳಿಸಿದರು.

ಅಗತ್ಯಕ್ಕಿಂತ ಹೆಚ್ಚು ಚಿನ್ನಾಭರಣ, ಹಣ ಇದ್ದರೇ ಯಾವುದೇ ಕಾರಣಕ್ಕೆ ಮನೆಯಲ್ಲಿ ಇಡಬಾರದು. ಬ್ಯಾಂಕ್ ಸೇಫರ್ ಲಾಕರ್ ನಲ್ಲಿ ಇಡಬೇಕು. ಬಹುತೇಕ ಅಪಘಾತಗಳಿಗೆ ದ್ವಿಚಕ್ರ ವಾಹನಗಳೇ ಕಾರಣವಾಗುತ್ತಿವೆ. ವಾಹನ ಖರೀದಿಸುವಾಗ ಮಾಲೀಕರು ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಿ, ಖರೀದಿ ಮಾಡಬೇಕು ಹಾಗೆ ಪ್ರಭುತ್ವ ಹೊಂದದ ಮಕ್ಕಳಿಗೆ ವಾಹನ ನೀಡಿದರೇ ಪಾಲಕರ ವಿರುದ್ಧವೇ ಪ್ರಕರಣ ದಾಖಲಿಸಲಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ವಾಡಿ ಪೊಲೀಸ್ ಠಾಣೆ ಸಬ್.ಇನ್ಸ್.ಪೆಕ್ಟರ್ ಕೆ.ತಿರುಮಲೇಶ ಮಾತನಾಡಿದರು. ಗ್ರಾಮದ ಮುಖಂಡರಾದ ಅಣ್ಣರಾಣ ಪಾಟೀಲ, ಬಸವರಾಜ ಸ್ಥಾವರಮಠ, ಗ್ರಾಂ.ಪಂಚಾಯಿತಿ ಅಧ್ಯಕ್ಷೆ ಅನಿತಾ ನಾಟೀಕಾರ, ಕಾರ್ಯದರ್ಶಿ ಸಂಗಮೇಶ ಹೀರೆಮಠ, ಗೌಸ್ ದುದ್ದನಿ, ಮಲ್ಲಿಕಾರ್ಜುನ ಸಿಮಿ, ಮಲ್ಲಪ್ಪ ನಾಟೀಕಾರ, ಸಮದ್, ಬಬಲು ಮುಲ್ಲಾ, ಕಲ್ಲಪ್ಪ ನಾಟೀಕಾರ, ಸಾಬಣ್ಣಾ ಪೂಜಾರಿ, ಶ್ರೀಶೈಲ ನಾಟೀಕಾರ ನಿರೂಪಿಸಿ ವಂದಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago