ಬಿಸಿ ಬಿಸಿ ಸುದ್ದಿ

ಡೆಂಗ್ಯೂ ಪಾಸಿಟಿವ್ ಬಂದರೆ ಸುತ್ತ 100 ಮನೆ ಸರ್ವೆ ಮಾಡಿ | ಡಿ. ಸಿ ಸೂಚನೆ

ಪಾಸಿಟಿವ್ ಬಂದರೆ ಸುತ್ತ 100 ಮನೆ ಸರ್ವೆ ಮಾಡಿ: ಡೆಂಗ್ಯೂ ಪಾಸಿಟಿವ್ ಪತ್ತೆಯಾದಲ್ಲಿ ರೋಗಿಯ ಮನೆ ಸುತ್ತ 100 ಮನೆಗಳು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸರ್ವೆ ಮಾಡಿ ಸೊಳ್ಳೆಗಳ ಮೂಲ ತಾಣಗಳನ್ನು ನಾಶಪಡಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಡಿ.ಸಿ. ಖಡಕ್ ಸೂಚನೆ ನೀಡಿದರು.

ಕಲಬುರಗಿ,ಜು.12(ಕ.ವಾ) ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ರೋಗವನ್ನು ಜಿಲ್ಲೆಯಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆಗಳ ಮೂಲ ತಾಣಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಕೆಲಸ ಚುರುಕುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಹೇಳಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೂಡಲೆ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಕಾರ್ಯಕ್ರಮಗಳು ರೂಪಿಸಬೇಕು ಎಂದರು.

ಜಿಲ್ಲೆಯ ಕೆರೆ, ಕುಂಟೆ, ಗದ್ದೆ, ಬಾವಿ, ಗ್ವಾರಿ, ಗಣಿ ಪ್ರದೇಶದ ನೀರು ನಿಂತ ಜಾಗದಲ್ಲಿರುವ ಈಡಿಸ್ ಸೊಳ್ಳೆಗಳನ್ನು ತಿನ್ನುವ ಗಪ್ಪೆ‌, ಗ್ಯಾಂಬೂಸಿಯಾ ಎಂಬ ಲಾರ್ವಾಹಾರಿ ಮೀನುಗಳನ್ನು ನೀರಿಗೆ ಬಿಡಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರ-ಪಟ್ಟಣ ಪ್ರದೇಶದಲ್ಲಿ ಪೌರ ಸಂಸ್ಥೆ ಮತ್ತು ಗ್ರಾಮೀಣ ಭಾಗದಲ್ಲಿ ಗ್ರಾಮ‌ ಪಂಚಾಯತಿಯೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕೆಂದರು.

ನಗರದ ವಾರ್ಡ್, ಕಾಲೋನಿಯಲ್ಲಿ ಅಲ್ಲಲ್ಲಿ ನೀರು ನಿಂತಿರುವ ತೆಗ್ಗು ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೀಟನಾಶಕ ಸಿಂಪಡಿಸಬೇಕು. ಇದಕ್ಕೆ ಸರ್ವಜನಿಕರು ಸಹ ಸಹಕರಿಸಬೇಕೆಂದ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ಡಿ.ಅವಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸತೀಷ ಕುಮಾರ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago