ಕಲಬುರಗಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಜೀವರಕ್ಷಾ ಟ್ರಸ್ಟ್ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮೊದಲ ವಲಯ ವೈಜ್ಞಾನಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದು ಅಧಿಕಾರಿ ಸುಬ್ಬಯ್ಯ ರುಕ್ಮಯ್ಯ ಗುತ್ತೇದಾರ್ ತಿಳಿಸಿದ್ದಾರೆ.
13 ರಂದು ಬೆಳಿಗ್ಗೆ 9ರಿಂದ ಮದ್ಯಾಹ್ನ 1.30ರವರೆಗೆ ನಗರದ ಮಹಾವೇದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜಿನ ಸ್ಕಿಲ್ ಲ್ಯಾಬ್ ನಲ್ಲಿ ಈ ಸಭೆ ಆಯೋಜನೆ
ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.