ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಮಹೇಶಕುಮಾರ ಗಂವ್ಹಾರ ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದ ಅತ್ಯುತ್ತಮ ರಾಷ್ಡ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ವೇಳೆ ವಿಶ್ವವಿದ್ಯಾಲಯದ ಕುಲಸಚಿವರಾದ(ಆಡಳಿತ) ಶಂಕರಗೌಡ ಸಿ. ಸೋಮನಾಳ ,ಕುಲಸಚಿವರು ( ಮೌಲ್ಯಮಾಪನ) ಪ್ರೊ.ಎಮ್.ಚಂದ್ರಶೇಖರ ಅವರಿಂದ ಪ್ರಶಸ್ತಿ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಡಾ.ಕಾರ್ತಿಗೇನ್,ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಡಾ.ಪ್ರತಾಪಲಿಂಗಯ್ಯ.ಉಪನಿರ್ದೇಶಕ ಯಲ್ಲಪ್ಪ ಉಪ್ಪಿನ್.ರಾ.ಸೇ.ಯೋ.ಕೋಶದ ಸಂಯೋಜನಾಧಿಕಾರಿ ಪ್ರೊ.ಶಾಂತಾದೇವಿ. ಟಿ ಹಾಗೂ ವಿವಿಧ ಮಹಾವಿದ್ಯಾಲಯಗಳ ಪ್ರಾಚಾರ್ಯರು,ಹಾಗೂ ಕಾರ್ಯಕ್ರಮಾಧಿಕಾರಿಗಳು ಉಪಸ್ಥಿತರಿದ್ದರು.
ಇವರ ಸಾಧನೆಗೆ ಸಂಸ್ಥೆಯ ಅಧ್ಯಕರು ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ, ಉಪಾಧ್ಯಕ್ಷ ರಾಜಾ ಬಿ. ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ ಚಿಂಚೋಳಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಸಿ. ಸಿ. ಪಾಟೀಲ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಹಾಗೂ ಸಿಬ್ಬಂದಿ ವರ್ಗದವರು ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ ಎಂದು ಸಂಸ್ಥೆಯ ಮಾಧ್ಯಮ ಪ್ರತಿನಿಧಿಯಾದ ಐ.ಕೆ. ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.