ಕಲಬುರಗಿ: ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ನೌಕರರ ಸಂಘ ನಿಯೋಗವು ಶುಕ್ರವಾರ ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮನವಿ ಪತ್ರದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಹಾಗೂ ಸರ್ಕಾರಿ ನೌಕರರು ಮತ್ತು ಅವಲಂಬಿತ ಕೂಟಂಬ ಸದಸ್ಯರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ (ಕ್ಯಾಶಲೆಸ್ ಟ್ರೀಟ್ ಮೆಂಟ್) ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯ ಮಾಡಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸಿದ್ದಲಿಂಗಯ್ಯ ಮಠಪತಿ, ಹಣಮಂತರಾಯ ಗೊಳಸಾರ, ಸತೀಷ್ ಸಜ್ಜನ್, ವಿಜಯಕುಮಾರ ನಾಗೂರ, ವೀರೇಶ ಪೂಜಾರಿ, ಹಣಮಂತ ಮರಡಿ, ಅವ್ವಣ್ಣ, ಧನಂಜಯ್ ಸೇರಿದಂತೆ ಅನೇಕ ನೌಕರರು ಉಪಸ್ಥಿತರಿದ್ದರು.