ಬಿಸಿ ಬಿಸಿ ಸುದ್ದಿ

ಸರ್ಕಾರಿ ಶಾಲಾ ಮಕ್ಕಳಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ; ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಟ್ಟಾಗ ಮಾತ್ರ ಸಮೃದ್ಧ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಕೆಎಸ್ಆರ್ ಪಿ ಪೊಲೀಸ್ ಇನ್ಸ್ಪೆಕ್ಟರ್ ಬಲಿರಾಮ ಚವ್ಹಾಣ ಹೇಳಿದರು.

ತಾಲೂಕಿನ ತಾಜ ಸುಲ್ತಾನಪೂರ ಕೆಎಸ್ಆರ್ ಪಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ “ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ” ಎಂಬ ಸಂಕಲ್ಪದೊಂದಿಗೆ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ
“ಸಾಧಕ ರತ್ನ” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಸರಕಾರಿ ಶಾಲೆಗಳು ಸರ್ವ ಜನಾಂಗದ ಶಾಂತಿಯ ತೋಟವಿದ್ದಂತೆ. ಈ ತೋಟದಲ್ಲಿ ಯಾವ ಬೆಳೆ ಬೆಳೆಯುತ್ತೇವೆ, ಅದರ ಪ್ರತಿಫಲವನ್ನು ನಾವು ಪಡೆಯುತ್ತೇವೆ.

ವಿದ್ಯಾರ್ಥಿಗಳು ಸತತ ಪ್ರಯತ್ನ ಉತ್ತಮ ಸಂಸ್ಕಾರದ ಬೀಜವನ್ನು ಬಿತ್ತಿ ಉತ್ತಮ ರಾಷ್ಟ್ರ ಕಟ್ಟುವ ಶಕ್ತಿಗಳಾ ಗಬೇಕೆಂದು ಮಾರ್ಮಿಕವಾಗಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಸ್ಯ ಸಾಹಿತಿ ಗುಂಡಣ್ಣ ಡಿಗ್ಗಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಹಲವಾರು ಹಾಸ್ಯದ ಚುಟುಕುಗಳನ್ನು ಹೇಳುತ್ತಾ ತಾಯಿ ದೇವರಾಗಬಹುದು ಆದರೆ ದೇವರು ತಾಯಿಯಾಗಲಾರ ಅದಕ್ಕಾಗಿ ತಾಯಿಗಿಂತ ದೊಡ್ಡ ದೇವರಿಲ್ಲ. ಹೆತ್ತ ತಾಯಿ ತಂದೆಯನ್ನು ಪೂಜಿಸಿದರೆ ಸ್ವರ್ಗಕ್ಕೆ ಹೋಗುವ ಬದಲು ಸ್ವರ್ಗವೇ ಭೂಮಿಯ ಮೇಲೆ ಸೃಷ್ಟಿಯಾಗುತ್ತದೆ.

ಹಲವಾರು ಹಾಸ್ಯದ ಮಾತನಾಡಿ ಉತ್ತಮ ಸಂದೇಶ ನೀಡುವುದರೊಂದಿಗೆ ನೆರೆದವರನ್ನು ರಂಜಿಸಿದರು. ಕಲಬುರಗಿ ಉಪ ತಸಿಲ್ದಾರರಾದ ವೀರಯ್ಯ ಹೊಸಮಠ ಪ್ರಶಸ್ತಿ ಪ್ರಧಾನ ಮಾಡಿದರು.

ಮುಖ್ಯ ಅತಿಥಿಗಳಾಗಿ ಕಲಬುರಗಿ ಉತ್ತರ ವಲಯ ಬಿಇಓ ಕಚೇರಿಯ ಶಿಕ್ಷಣ ಸಂಯೋಜಕರಾದ ಮಸ್ತಾನಸಾಬ, ಸಂಯುಕ್ತ ಕರ್ನಾಟಕ ದಿನಪತ್ರಿಕೆ ವರದಿಗಾರರಾದ ಭೀಮಾಶಂಕರ ಫಿರೋಜಾಬಾದ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸಂಜೀವಕುಮಾರ ಜವರಕರ, ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆ ಏಎಸ್ಐ ಪುಂಡಲಿಕ ಜಮಾದಾರ, ಕಲಬುರಗಿ ಉತ್ತರ ವಲಯ ಪ್ರೌಢಶಾಲೆಯ ಸಹ ಶಿಕ್ಷಕರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ. ಭೀಮಸಿಂಗ ರಾಠೋಡ ಆಗಮಿಸಿದ್ದರು. ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ, ತಾಜ ಸುಲ್ತಾನಪುರ ಕೆಎಸ್ಆರ್ ಪಿ ಸರಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶಿವಕುಮಾರ ಪಾರಶೆಟ್ಟಿ,ತಾಜ ಸುಲ್ತಾನಪುರದ ಮಾಪಣ್ಣ ಖರ್ಗೆ ಸ್ಮಾರಕ ಪ್ರೌಢಶಾಲೆಯ ಮುಖ್ಯ ಗುರುಗಳಾದ ದಯಾನಂದ ಬಿರಾದಾರ, ತಾಜ ಸುಲ್ತಾನಪುರ ಗೌತಮಪೂರ್ಣ ಅನುದಾನಿತ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸೋಮನಾಥ ಇಂಡಿ, ಶಿಕ್ಷಣ ಪ್ರೇಮಿ ರವಿಕುಮಾರ ಶಹಾಪುರಕರ, ಕಲಾವಿದ ಮಹೇಶ್ ತೆಲೆಕುಣಿ ಸಂಘದ ಸದಸ್ಯರು, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿಜಯಲಕ್ಷ್ಮಿ ವೀರಣ್ಣ, ಜಿಯಾ ಜೈನಬ ಅಪಸಿನ, ಅರ್ಚನಾ ಆರ ಹೊಳಕುಂದಿ, ಮೇಘನಾ ಎ. ಹೂನ್ನಳ್ಳಿ, ಪ್ರಜ್ಞಾ ಎಮ್. ಡಾಂಗೆ, ಶ್ರವಣಕುಮಾರ ರಾಣಪ್ಪ ವಿದ್ಯಾರ್ಥಿಗಳಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧನ್ಯವಾದಗಳೊಂದಿಗೆ, ಹಣಮಂತರಾಯ ಅಟ್ಟೂರ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago