ಬಿಸಿ ಬಿಸಿ ಸುದ್ದಿ

ಬೀದರ್: ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ

ಬೀದರ್: ವಿಶ್ಬಗುರು ಬಸವಣ್ಣನವರ ಕಾಯಕ ಭೂಮಿಯಾದ ಬೀದರ್ ನಲ್ಲಿ ರಾಜ್ಯ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿ ರಾಜ್ಯದ ಎಲ್ಲ ಜಿಲ್ಲೆಗಳ ಕಾಯಕ ಜೀವಿಗಳನ್ನು ಗುರುತಿಸಿ ಗೌರವಿಸುವುದು ಸ್ತುತ್ಯರ್ಹವಾದ ಕೆಲಸ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಗರದ ಡಾ. ಚನ್ನಬಸವಪಟ್ಟದ್ದೇವರ ರಂಗಮಂದಿರದಲ್ಲಿ ಶನಿವಾರ ನಡೆದ ಶಿಕ್ಷಣ ನಮ್ಮ ಹಕ್ಕು ವಿಚಾರ ಸಂಕಿರಣ ಮತ್ತು ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ತುಂಬುವ ನೈತಿಕ ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನದ ಪಾಠದ ಅಗತ್ಯವಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಡಾ.‌ ಅಂಜನಪ್ಪ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜೊತೆಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಐ ಆ್ಯಮ್ ದಿ ಬೆಸ್ಟ್ ಎಂಬ ಪಾಸಿಟಿವ್ ಅಟಿಟ್ಯೂಡ್ ಬಿತ್ತುವ ಕೆಲಸ ಆಗಬೇಕಿದೆ ಎಂದು ಹೇಳಿದ ಅವರು, ಡೆಂಗೆ, ಕೊರೊನಾ ಬಗ್ಗೆ ಭಯ ಬೇಡ. ಆದರೆ ಮುನ್ನೆಚ್ಚರಿಕೆ ಅಗತ್ಯ ಎಂದರು.

ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಭಾಷಣ ಮಾಡಿದ ಅಂತಾರಾಷ್ಟ್ರೀಯ ಖ್ಯಾತಿಯ ಕೌಶಲ ತರಬೇರುದಾರ ಚೇತನ ರಾಮ್, ಜ್ಞಾನ, ವಿಜ್ಞಾನ ತಂತ್ರಜ್ಞಾನ ದ ಜೊತೆಗೆ ಸುಜ್ಞಾನ ಕಲಿಸಬೇಕು.‌ ಅಸಾಧ್ಯವೆನ್ನುವುದು ನಮ್ಮ ಹತ್ತಿರ ಸುಳಿಯಬಾರದು.‌ಅಸಾಧ್ಯವನ್ನು ಸಮಾದಿ ಮಾಡಿ ಬದುಕಬೇಕು ಎಂದರು.

ಏನನ್ನಾದರೂ ಅಂದುಕೊಳ್ಳುವ, ಮಾಡುವ, ಆಗುವ ಜಗತ್ತಿನ ಏಕೈಕ ಜೀವಿ ಮನುಷ್ಯ. ನಗು ಜೀವನವನ್ನು ಉಳಿಸಿದರೆ ಹಣ ಜೀವನವನ್ನು ಉಳಿಸುವುದಿಲ್ಲ. ಪ್ರೀತಿಯಲ್ಲಿ ನಗುವಿದೆ. ನಗುವಿನಲ್ಲಿ ಪ್ರೀತಿಯಿದೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಅವರಿಗೆ ಇಂಗ್ಲಿಷ್ ಮಾತನಾಡುವುದು ಮತ್ತು ತರಬೇತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಚಂದ್ರಶೇಖರ ಪಾಟೀಲ, ಮಾರುತಿರಾವ ಮೂಳೆ, ಭೂದಾನಿ ಆರ್. ಬಿಳಿಶಿವಾಲೆ, ಬಸವರಾಜ ಧನ್ನೂರ, ಗೌರಿ ಪ್ರಸನ್ನ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿ ಇದ್ದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆ ವಹಿಸಿದ್ದರು.

ರೇಣುಕಾ ಮಳ್ಳಿ ನಿರೂಪಿಸಿದರು. ಬಾಬುರಾವ ದಾನಿ ಸ್ವಾಗತಿಸಿದರು. ವಿ.ಟಿ.‌ಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು.

ಇದೇವೇಳೆಯಲ್ಲಿ ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಿಭಾಗದ ಸುಮಾರು 38 ಜನರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾದಗಿರಿ ಜಿಲ್ಲೆಯ ಚನ್ನಪ್ಪ ಆನೇಗುಂದಿ, ಕಲಬುರಗಿ ಜಿಲ್ಲೆಯ ಶಿವಣ್ಣಗೌಡ ಹಂಗರಗಿ, ಬೀದರ್ ಜಿಲ್ಲೆಯ ಡಾ. ಗಂಗಾಂಬಿಕಾ ಅಕ್ಕ, ಡಾ. ಜಿ.ವಿ. ಶಿವಪ್ರಕಾಶ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂಡಿಯನ್ ಐಡಲ್ ಸ್ಪರ್ಧಿ ಶಿವಾನಿ ಶಿವದಾಸ ಸ್ವಾಮಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಕರಾವಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕ ಹನುಮಂತೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ, ಸಂತೋಷ ಪಾಟೀಲ, ವಿಜಯಕುಮಾರ, ಶರಣಬಸವ ಕಲ್ಲಾ, ರವೀಂದ್ರ ಶಾಬಾದಿ, ಡಾ. ಶಿವರಂಜನ ಸತ್ಯಂಪೇಟೆ, ಶರಣಬಾಪ್ಪ ನಾಗೂರ, ಸತೀಶ ಸಜ್ಜನ್, ನೀಲಕಂಠ ಅವಂಟಿ, ಕರಾವಿಪ ಜಿಲ್ಲಾಧ್ಯಕ್ಷ ಕಲಾಲ ದೇವಿಂದ್ರಪ್ಪ ಸೇರಿದಂತೆ ಹಲವರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago