ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಇಲ್ಲಿನ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜರುಗಿದ ಜನತಾ ಅದಾಲತ್ ನಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ 520 ಪ್ರಕರಣ ವಿಲೇವಾರಿ ಮಾಡಿ 14,00,71,305 ರೂ. ಪರಿಹಾರ ವಿತರಣೆಗೆ ಜನತಾ ನ್ಯಾಯಾಲಯ ಆದೇಶಿಸಿತ್ತು.
ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಅರ್ಜಿದಾರ, ಪ್ರತಿವಾದಗಳು ಹಾಗೂ ವಕೀಲರ ಸಮಕ್ಷಮ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು.
ಲೋಕ ಅದಾಲತ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಅಶೋಕ ಎಸ್.ಕಿಣಗಿ, ನ್ಯಾ.ಉಮೇಶ್ ಎಂ.ಅಡಿಗ ಹಾಗೂ ನ್ಯಾ.ರಾಜೇಶ್ ರೈ.ಕೆ ರವರು ಭಾಗವಹಿಸಿದ್ದರು.
ಉಚ್ಛ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವೀ.ಹಿರೇಮಠ, ಅಪರ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಾವಾದಿಗಳು, ಕಕ್ಷಿದಾರರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…