ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಮನವಿ

0
74

ಶಹಾಬಾದ: ಸರಕಾರಿ ನೌಕರರಿಗೆ ಸಂಬಂಧಿಸಿದ ಏಳನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ತಾಲೂಕಾ ಸರಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರ ಜಗದೀಶ ಚೌರ್ ಮೂಲಕ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ಸರ್ಕಾರ 2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿಯನ್ನು ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು. ಅದು ಅನುμÁ್ಠನಗೊಂಡು 5 ವರ್ಷವಾಗಿರುವುದರಿಂದ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಾಗಿತ್ತು.

Contact Your\'s Advertisement; 9902492681

ಸಂಘದ ಒತ್ತಡದಿಂದಾಗಿ ಹಿಂದಿನ ಸರ್ಕಾರ ಅದೇ ವರ್ಷದ ನವೆಂಬರ್‍ನಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿದ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು’ ಎಂದರು.

‘ಆರು ತಿಂಗಳೊಳಗೆ ವರದಿ ಪಡೆಯದ ಸರ್ಕಾರ ಆಯೋಗವನ್ನು ಎರಡು ಸಲ ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಈ ವರ್ಷ ಮಾರ್ಚ್‍ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಇದರೊಂದಿಗೆ ಆಯೋಗ ರಚನೆಯಾಗಿ 19 ತಿಂಗಳು ಕಳೆದಿವೆ. ಇದರ ಮಧ್ಯೆ ಸಂಘ ಕೈಗೊಂಡ ಮುಷ್ಕರದಿಂದಾಗಿ ಸರ್ಕಾರ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಅಲ್ಲದೆ, ನೌಕರರ ಸಮ್ಮೇಳನದದಲ್ಲಿ ಮುಖ್ಯಮಂತ್ರಿ ನೀಡಿದ್ದ ವರದಿ ಅನುμÁ್ಠನದ ಭರವಸೆ ಇನ್ನೂ ಈಡೇರಿಲ್ಲ. ಈಗಲಾದರೂ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಆಯೋಗದ ವರದಿ ಜಾರಿ ಜೊತೆಗೆ ಎನ್‍ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುμÁ್ಠನಗೊಳಿಸಬೇಕು.

ರಾಜ್ಯದಲ್ಲಿ 2.60 ಲಕ್ಷ ಖಾಲಿ ಹುದ್ದೆಗಳಿವೆ. ಹಾಲಿ ನೌಕರರಿಗೆ ಕಾರ್ಯಭಾರ ಹೆಚ್ಚಾಗಿ ಒತ್ತಡಕ್ಕೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ, ಕೂಡಲೇ ಯೋಜನೆ ಜಾರಿಗೊಳಿಸಬೇಕು’ ಎಂದರು.

ಈ ಸಂದರ್ಭದಲ್ಲಿ ಶಶಿಕಾಂತ ಭರಣಿ, ಸಂಜಯ ರಾಠೋಡ, ಮೋಹನ ಗಾಯಕವಾಡ,ಜಗನ್ನಾಥ ಹೊಸಮನಿ,ಡಾ.ಸಂಧ್ಯಾ ಕಾನೇಕರ್,ರಘುನಾಥ ನರಸಾಳೆ, ಶಾಂತಮಲ್ಲ ಶಿವಬೋ, ಶ್ರೀಮಂತ, ಶಿವಾನಂದ, ಮ.ಖಾದ್ರಿ,ಅನೀಲಕುಮಾರ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here