ಕಲಬುರಗಿ : ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪರಿಣಿತ ತಜ್ಞರ ನಿಯೋಗ ನೂತನ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ವಿಷಯಗಳ ಕುರಿತು ಚರ್ಚಿಸಿ ಮನವರಿಕೆ ಮಾಡಲಾಯಿತು.
ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ನೂತನ ಸಂಸದರಿಗೆ ಅಭಿನಂದನೆಯನ್ನು ಸಲ್ಲಿಸಿ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಸರಕಾರ ಘೋಷಣೆ ಮಾಡಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ, ಜವಳಿ ಪಾರ್ಕ ಅನುಷ್ಠಾನ, ಕಲಬುರಗಿ ಎರಡನೇ ವರ್ತುಲ ರಸ್ತೆ, ಕಲ್ಯಾಣ ಪಥ ಹೆದ್ದಾರಿ ರಸ್ತೆಗಳು, ಏಮ್ಸ್ ಸ್ಥಾಪನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ನೂತನ ಸಂಸದರಿಗೆ ಮನವರಿಕೆ ಮಾಡಿದರು.
ಪರಿಣಿತ ತಜ್ಞರಾದ ಪ್ರೊ. ಆರ್.ಕೆ. ಹುಡಗಿರವರು ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶದ ವಿಭಾಗೀಯ ಕೇಂದ್ರ, ಕಲಬುರಗಿಯಲ್ಲಿ ಒಂದು ದಿನದ ಬೃಹತ್ ಕಾರ್ಯಾಗಾರ ಸಮಿತಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕಾರ್ಯಾಗಾರದ ಉದ್ಘಾಟನೆ ಎ.ಐಸಿ.ಸಿ. ಅಧ್ಯಕ್ಷರಿಂದ ಮಾಡಿಸಿ ಇದರಲ್ಲಿ ಕಲ್ಯಾಣ ಕರ್ನಾಟಕದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಸಂಘ ಸಂಸ್ಥೆಗಳ ಅಧ್ಯಕ್ಷರು, ವಿಶೇಷವಾಗಿ ಏಳು ಜಿಲ್ಲೆಯ ಪರಿಣಿತ ವ್ಯಕ್ತಿಗಳನ್ನು ಆಹ್ವಾನಿಸಿ 371ನೇ(ಜೆ) ಕಲಂ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದರ ಜೊತೆಗೆ ಇದರ ಪರಿಣಾಮಕಾರಿ ಅನುಷ್ಠಾನದ ಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕದ ರಚನಾತ್ಮಕ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸುವ ಫಲಪ್ರದ ಐತಿಹಾಸಿಕ ವೇದಿಕೆಯಾಗಬೇಕು. ಇದಕ್ಕೆ ನೂತನ ಸಂಸದರು ಸ್ಪಂದಿಸಬೇಕೆಂದು ತಿಳಿಸಿದರು.
ನೂತನ ಲೋಕಸಭಾ ಸದಸ್ಯರಾದ ದೊಡ್ಡಮನಿರವರು ಮಾತನಾಡಿ, ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾವು ಅತಿ ಗಂಭೀರವಾಗಿ ಪರಿಗಣಿಸಿ ಸರಕಾರ ಮಟ್ಟದಲ್ಲಿ ಒತ್ತಾಯ ತರುವುದಲ್ಲದೆ ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಕಲ್ಯಾಣ ಕರ್ನಾಟಕದ ಐದು ಲೋಕಸಭಾ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಂಘಟಿತ ರಾಜಕಿಯ ಇಚ್ಛಾಶಕ್ತಿ ವ್ಯಕ್ತಪಡಿಸುವ ಬಗ್ಗೆ ತಿಳಿಸಿದರು. ಸಮಿತಿ ಆಯೋಜಿಸುವ ಒಂದು ದಿನದ ಕಾರ್ಯಾಗಾರದಲ್ಲಿ ತಾವು ಸೇರಿದಂತೆ ಎಲ್ಲರನ್ನು ಸೇರಿಸುವ ಕಾರ್ಯಕ್ಕೆ ತಾವು ಸಂಪೂರ್ಣವಾಗಿ ಸಹಕಾರ ಸ್ಪಂದನೆ ನೀಡುವುದಾಗಿ ಬಲವಾದ ಇಚ್ಛಾಶಕ್ತಿ ವ್ಯಕ್ತಪಡಿಸಿದರು.
ಈ ನಿಯೋಗದಲ್ಲಿ ಪ್ರೊ. ಬಸವರಾಜ ಕುಮನೂರ, ಪ್ರೊ. ಶಂಕ್ರೆಪ ಹತ್ತಿ, ಡಾ. ಬಸವರಾಜ ಕಳಸಾ, ಡಾ. ಮಾಜಿದ್ ದಾಗಿ, ವಿನಾಯಕ ಪತ್ರಗಾರ, ಜಾನ್ ವಿಲ್ಸನ್, ರೌಫ್ ಖಾದರಿ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಮಂಜೂರ ಡೆಕ್ಕನಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…