ಕಲಬುರಗಿ; ಕೃಷಿ ಜಮೀನು ಒಂದರಲ್ಲಿ ಮಹಿಳೆ ಓರ್ವಳನ್ನು ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಮಹಾಗಾಂವ ಪಿಎಸ್ ಐ ಆಶಾ ರಾಠೋಡ, ಕಮಲಾಪುರ ಸಿಪಿಐ ವಿ.ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಗೂರ ಗ್ರಾಮದ ಖಾಸಗಿ ಕೃಷಿ ಜಮಿನಲ್ಲಿ ದಂಡೆಯಲ್ಲಿ 40%ರಷ್ಟು ಸುಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಒಂದು ದಿನ ಹಿಂದೆಏ ಈ ಕೊಲೆ ನಡೆದಿರಬಹುದೆಂಬ ಅನುಮಾನಗಳು ವ್ಯಕ್ತವಾಗುತ್ತಿದೆ.
ಕೊಲೆಯಾದ ಮಹಿಳೆಯ ವಿಳಾಸ ಮತ್ತು ಗುರುತು ಪತ್ತೆಯಾಗಿಲ್ಲ. ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…