ಕಲಬುರಗಿ ಸಾಹಿತ್ಯ ಪರಿಷತ್ತಿನ ಕಾರ್ಯಗಳಿಗೆ ಸಂಸದರ ಮೆಚ್ಚುಗೆ

0
237

ಕಲಬುರಗಿ: ಕನ್ನಡ ಭಾಷೆ ಮತ್ತು ಸಂಸ್ಕøತಿಯ ಬೆಳವಣಿಗೆಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹಾಗೂ ಅವರ ಸಾಂಸ್ಕøತಿಕ ಬಳಗವು ನಿರಂತರವು ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದಕ್ಕೆ ನೂತನ ಸಂಸದ ರಾಧಾಕೃಷ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗೌರವ ಸತ್ಕಾರ ಸ್ವೀಕರಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಈ ಭಾಗದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಇಂದು ಅಗತ್ಯವಾಗಿದೆ. ಸಾಂಸ್ಕøತಿಕ ವಾತಾವರಣ ಮೂಡಿಸಲಾಗುತ್ತಿದೆ. ಜತೆಗೆ ವಿವಿಧ ಸಾಹಿತ್ಯ ಸಮ್ಮೇಳನಗಳ ಮೂಲಕ ಭಾಷೆ ಮತ್ತು ಸಂಸ್ಕøತಿಗೆ ಸೇವೆ ಸಲ್ಲಿಸುತ್ತಿದೆ. ಹಾಗೂ ಸಮಾಜ ಸುಧಾರಕರಾದ ಬುದ್ಧ, ಬಸವ ಮತ್ತು ಡಾ. ಅಂಬೇಡ್ಕರ್ ಅವರ ಚಿಂತನೆಯ ತಳಹದಿಯ ಮೇಲೆ ಪರಿಷತ್ತು ಸಾಗುತ್ತಿದೆ ಎಂದು ಹೇಳಿದರು.

Contact Your\'s Advertisement; 9902492681

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಸಾಹಿತಿ ಮುಡುಬಿ ಗುಂಡೇರಾವ, ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ವಿನೋದಕುಮಾರ ಜೇನವೇರಿ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಸೋಮಶೇಖರಯ್ಯ ಹೊಸಮಠ, ಬಸಯ್ಯಾ ಸ್ವಾಮಿ, ಗಣೇಶ ಚಿನ್ನಾಕಾರ, ಎಂ ಎನ್ ಸುಗಂದಿ, ಡಾ. ರೆಹಮಾನ್ ಪಟೇಲ್, ü ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here