ಮಲ್ಲಾಬಾದ್‌ ಏತ ನೀರಾವರಿ ಯೋಜನೆ ಅನುಷ್ಠಾನ ಪ್ರಕ್ರಿಯೆ ತ್ವರಿತ: ಟೆಂಡರ್‌ ಕರೆಯಲು ನಿರ್ದೇಶನ: ಡಾ.ಅಜಯಸಿಂಗ್‌ ಹೇಳಿಕೆ

ಕಲಬುರಗಿ: ಜೇವರ್ಗಿ ತಾಲೂಕಿನ ಮಲ್ಲಾಬಾದ್‌ ಏತ ನೀರಾವರಿ ಯೋಜನೆಯ ಅನುಷ್ಠಾನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಟೆಂಡರ್‌ ಕರೆಯುವಂತೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ಡಾ. ಅಜಯಸಿಂಗ್‌ ಧರಂಸಿಂಗ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಲ್ಲಾಬಾದ್‌ ಏತ ನೀರಾವರಿ ಯೋಜನೆ ಜಾರಿಗೆ ನಮ್ಮ ಸರಕಾರ ಬದ್ಧವಾಗಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರು ಜೇವರ್ಗಿಯಲ್ಲಿಚುನಾವಣಾ ಪ್ರಚಾರ ಸಭೆಯಲ್ಲಿವಾಗ್ದಾನ ನೀಡಿದ್ದರು. ಅದರಂತೆ ಮುಂದಿನ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳಲು ಸೂಚನೆ ನೀಡಿರುವರು ಎಂದಿದ್ದಾರೆ.

ಯೋಜನೆ ಅನುಷ್ಠಾನದ ಬಗ್ಗೆ ಕೃಷ್ಣಭಾಗ್ಯ ಜಲ ನಿಗಮದ 140ನೇ ಆಡಳಿತ ಮಂಡಳಿ ಸಭೆಯಲ್ಲಿಅಂಗೀಕಾರವಾಗಿದೆ. ಯೋಜನೆಯ ಹಂತ 1, 2 ಮತ್ತು 3ರ ಬಾಕಿ ಉಳಿದಿರುವ ವಿತರಣಾ ಕಾಮಗಾರಿಗಳ ಅನುಷ್ಠಾನಕ್ಕೆ ಅನುದಾನವೂ ನಿಗದಿಪಡಿಸಲು ಸಚಿವರು ಸೂಚಿಸಿದ್ದಾರೆ. ಈ ಯೋಜನೆ ಪೂರ್ಣಗೊಳಿಸಿ 33, 860 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸರಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಅಜಯಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ನಾನು ಈಗಾಗಲೇ ಡಿಸಿಎಂ ಅವರನ್ನು ಭೇಟಿಯಗಿ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಮನವರಿಕೆ ಮಾಡಿಕೊಟ್ಟಿರುವೆ. ಸಚಿವರು ಸಹ ಜಲಸಂಪನ್ಮೂಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಲ್ಲಾಬಾದ್‌ ಏತ ನೀರಾವರಿ ಯೋಜನೆ ಮೂಲಕ ಯಡ್ರಾಮಿ ತಾಲೂಕಿನ 38 ಹಳ್ಳಿಗಳು ಮತ್ತು ಜೇವರ್ಗಿ ತಾಲೂಕಿನ 20 ಹಳ್ಳಿಗಳ ರೈತರ ಜಮೀನುಗಳಿಗೆ ನೀರು ಒದಗಿಸಲು ಕಂಕಣಬದ್ಧವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ವಿವರಿಸಿದ್ದಾರೆ.

ಮಲ್ಲಾಬಾದ್‌ ಏತ ನೀರಾವರಿ ಯೋಜನೆ ಜಾರಿಗೆ ನಮ್ಮ ಸರಕಾರ ಬದ್ಧವಾಗಿದೆ. ಯೋಜನೆಯ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು ಜಲಸಂಪನ್ಮೂಲ ಸಚಿವರು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಪ್ರಕ್ರಿಯೆಗಳು ತ್ವರಿತವಾಗಿ ನಡೆದಿವೆ. ಅದಕ್ಕಾಗಿ ಕ್ಷೇತ್ರದ ಪೂಜ್ಯ ಶ್ರೀಗಳು, ನೀರಾವರಿ ಹೋರಾಟಗಾರರು, ರೈತ ಮುಖಂಡರು ಸರಕಾರಕ್ಕೆ ಸಹಕರಿಸಬೇಕು. -ಡಾ.ಅಜಯಸಿಂಗ್‌, ಶಾಸಕರು, ಜೇವರ್ಗಿ

emedialine

Recent Posts

ಕಾಳಗಿ ತಲುಪಿದ ವಿಕಾಸ ಪಥ ಯಾತ್ರೆ

ಕಾಳಗಿ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿಕಾಸ ಪಥ ಯಾತ್ರೆಗೆ ಅದ್ದೂರಿ ಸ್ವಾಗತ ನೀಡಲಾಯಿತು. 7ನೇ ಭಾರತ ವಿಕಾಸ ಸಂಗಮದ (ಭಾರತ…

5 hours ago

ಕಲಬುರಗಿ ಕಸಾಪ ದಿಂದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ 15 ರಂದು

ಕಲಬುರಗಿ: ಸುಭದ್ರ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯ ಆಯ್ದ ಶಿಕ್ಷಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ…

5 hours ago

ಕೆಬಿಎನ ವಿವಿಯಲ್ಲಿ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಸ್ಥಳೀಯ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಇಂಜಿನಿಯರಿಂಗ ನಿಕಾಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ ಮತ್ತು ಕಂಪ್ಯೂಟರ್ ಸೈನ್ಸ್…

8 hours ago

ಹನಿಟ್ರ್ಯಾಪ್ ಆರೋಪಿಗಳು ಸ್ವಯಂ ಶರಣಗಾತರಾಗಿಲ್ಲ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

ಕಲಬುರಗಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ ಆರೋಪಿಗಳು ಸ್ವಯಂ ಪ್ರೇರಿತರಾಗಿ ಶರಣಾಗತರಾಗಿಲ್ಲ.…

16 hours ago

ಚಿಂಚೋಳಿಯಲ್ಲಿ ಬೀದರ್ ಸಂಸದರಿಗೆ ಅಭಿನಂದನಾ ಸಮಾರಂಭ: ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಭರವಸೆ

ಚಿಂಚೋಳಿ: ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನು ಚಿರರುಣಿಯಾಗಿರುತ್ತೇನೆ. ಅತಿ ಹೆಚ್ಚು ಮತಗಳಿಂದ ನನಗೆ ಲೋಕಸಭೆಗೆ ಕಳುಹಿಸಿದ್ದು,…

17 hours ago

ಚಿಂಚೋಳಿ ಪುರಸಭೆ ನೂತನ ಅಧ್ಯಕ್ಷರಾಗಿ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಆಯ್ಕೆ

ಚಿಂಚೋಳಿ: ಅವಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆನಂದ್ ತಂದೆ ನಾಗೇಂದ್ರಪ್ಪ ಟೈಗರ್,…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420