ಬಿಸಿ ಬಿಸಿ ಸುದ್ದಿ

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್- ತಿಮ್ಮಾಪುರ ಕಲ್ಯಾಣಾಶ್ರಮದ ಮಹಾಂತ ಸ್ವಾಮೀಜಿ ನುಡಿದರು.

ಹಾಗರಗಾ ಗ್ರಾಮದ ಲಿಂ.ಗಂಗಮ್ಮ ಹಾಗೂ ಲಿಂ. ಬಸವಣ್ಣಪ್ಪ ಕೇಸೂರ ಸ್ಮರಣಾರ್ಥ ಇಲ್ಲಿನ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ೮೦೮ನೇ ಅರಿವಿನ‌ ಮನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಡ, ದೀನ-ದಲಿತರಲ್ಲದೆ ಅನ್ಯ ಕೋವಿನವರಿಗೂ ಸಹಾಯ ಸಹಕಾರ ಮಾಡಿದ ಕೇಸೂರ ಮನೆತನ ನಿಜಕ್ಕೂ ಕಲ್ಯಾಣ ಕಾರ್ಯಕ್ಕೆ ಹೆಸರಾಗಿದೆ ಎಂದರು.

ಪರಸ್ಪರ ದ್ವೇಷಾಸೂಹೆಗಳಿಂದ ಕೂಡಿರುವ ಈ ಸಮಾಜದಲ್ಲಿ ಮನುಷ್ಯ ಮನುಷ್ಯರನ್ನು ಪ್ರೀತಿಸುವ, ಗೌರವಿಸುವ, ಸೌಹಾರ್ದಯುತವಾಗಿ ಬಾಳಿ ಬದುಕುವ ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತುವ ಕಾರ್ಯ ಆಗಬೇಕು ಎಂದು ಅವರು ತಿಳಿಸಿದರು.

ಹಿರಿಯರ ಸ್ಮರಣೆಯನ್ನು ಕೇವಲ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸದೆ ಆ ನಿಮಿತ್ತ ಜವರಿಗೆ ಅನ್ನ ದಾಸೋಹ ಮತ್ತು ಜ್ಞಾನದಾಸೋಹ ಮಾಡುತ್ತಿರುವ ಅವರ ಮಕ್ಕಳು ಮಾದರಿ ಕಾರ್ಯ ಮಾಡುವ ಮೂಲಕ ಹಿರಿಯರ ಸ್ಮರಣೆಯನ್ನು ಬಹಳಷ್ಟು ಅರ್ಥಪೂರ್ಣವಾಗಿ ಮಾಡುತ್ತಿದ್ದಾರೆ. ತ್ತಮ ವಿಚಾರ, ಸಂಸ್ಕೃತಿಯನ್ನು ಹಂಚುವುದು, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸಿದ್ದರು. ಎಚ್‌.ಕೆ. ಉದ್ದಂಡಯ್ಯ ನಿರೂಪಿಸಿದರು. ಬಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಂಡಪ್ಪ ಕೇಸೂರ, ದತ್ತಿ, ದಾಸೋಹಿಗಳಾದ ಚಿತ್ರಶೇಖರ ಬಸವಣ್ಣಪ್ಪ ಪರಿವಾರದವರು, ಸಂಗೀತ ಕಲಾವಿದರು ಇದ್ದರು.

ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಡಾ. ಶಿವರಂಜನ ಸತ್ಯಂಪೇಟೆ, ಶರಣಗೌಡ ಪಾಳಾ, ಎಸ್.ವಿ.‌ಹತ್ತಿ, ಸತೀಶ ಸಜ್ಜನ, ವಿಶ್ವನಾಥ ಮಂಗಲಗಿ, ಮಲ್ಲಣ್ಞ ಗುಳಗಿ, ಸಂಗಣ್ಣ ಜಿ. ಸತ್ಯಂಪೇಟೆ ಇತರರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago