ಕಲಬುರಗಿ: ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆಯಲ್ಲಿ ಏರುಪೇರು ಸಂಭವಿಸಿ ವಕ್ತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಧೀಡಿರನೇ ಇಲ್ಲಿನ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ನಡೆದಿದೆ.
ಜೇವರ್ಗಿ ತಾಲೂಕು ಜೇನಾಪುರ ಗ್ರಾಮದ ನಾಗಣ್ಣ (54) ಮೃತಪಟ್ಟ ವ್ಯಕ್ತಿ. ನಾಗಣ್ಣ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದ ವೇಳೆ ಹೊಟ್ಟೆಯ ಭಾಗಕ್ಕೆ ಮಂಚ ಬಡಿದಿತ್ತು. ಜುಲೈ 3 ರಂದು ಚಿಕಿತ್ಸೆಗೆಂದು ತನ್ನ ಮಗನೊಂದಿಗೆ ಕಲಬುರಗಿಯಲ್ಲಿರುವ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.
ತಪಾಸಣೆ ನಡೆಸಿದ್ದ ಆಸ್ಪತ್ರೆಯ ವೈದ್ಯರು, ಹೊಟ್ಟೆಗೆ ಪೆಟ್ಟು ಬಡಿದಿರುವುದರಿಂದ ಹೊಟ್ಟೆಯೊಳಗೆ ರಕ್ತ ಹೆಪ್ಪುಗಟ್ಟಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಹೇಳಿದರು. ಶಸ್ತ್ರಚಿಕಿತ್ಸೆ ಬಳಿಕ ವ್ಯಕ್ತಿಯು ದಿಢೀರನೆ ಕೋಮಾಕ್ಕೆ ಜಾರಿದ್ದಾರೆ. 10 -15 ದಿನಗಳು ಕೋಮಾದಲ್ಲಿದ್ದ ವ್ಯಕ್ತಿ ಇಂದು ಸಾವನ್ನಪ್ಪಿರುವುದ್ದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಹೋಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ ವ್ಯಕ್ತಿಯನ್ನು ಕೋಮಾಕ್ಕೆ ಜಾರುವಂತೆ ಚಿಕಿತ್ಸೆನೀಡಿ ನಿರ್ಲಕ್ಷ್ಯವಹಿಸಿದ ವೈದ್ಯರು ಮತ್ತು ಯುನೈಟೆಡ್ ಆಸ್ಪತ್ರೆಯ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಈ ಘಟನೆ ಸಾಮಾನ್ಯವಲ್ಲ ಜಿಲ್ಲಾ ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳ ರೋಗಿಗಳ ಜೀವಕ್ಕೆ ರಕ್ಷಣೆ ಒದಗಿಸುವ ನೀಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನೆ ನೀರತ ಕುಟುಂಬಸ್ಥರು ರಸ್ತೆ ತಡೆದು ಜಿಲ್ಲಾ ಆರೋಗ್ಯ ಅಧಿಕಾರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆ ಎದುರು ನೂರಾರು ಜನರು ಜಮಾಗೊಂಡು ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಹಾವಳಿಯ ವಿರುದ್ಧ ಅಸಮಧಾನ ಹೋರಹಾಕಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…