ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ ಜಿಲ್ಲೆಯವರನ್ನೇ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕುಂಬಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ಲಕ್ಷ ಮತದಾರರು ಹೊಂದಿರುವ ಕುಂಬಾರ ಸಮಾಜಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಾತುರಿಯಲ್ಲಿ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ ಯಾವುದೇ ಬಿಡಿಗಾಸು ಅನುದಾನವನ್ನು ನೀಡದೆ ಕೇವಲ ಕಾಟಾಚಾರಕ್ಕೆ ಘೋಷಣೆ ಮಾಡಿ ಬಿಟ್ಟಿರುವುದು ವಿμÁದನೀಯ ಸಂಗತಿ ಎಂದರು.
ಇಲ್ಲಿವರೆಗೂ ಸಮಾಜಕ್ಕೆ ಬರುವ ಅಲ್ಪ ಸ್ವಲ್ಪ ಸವಲತ್ತುಗಳು ಸಹ ಬೆಂಗಳೂರು ಅಥವಾ ಮೈಸೂರಿನವರೇ ತೆಗೆದುಕೊಂಡು ಹೋಗುತ್ತಿದ್ದಾರೆ.ಹೀಗಾಗಿ ರಾಜ್ಯ ಸರ್ಕಾರದ ಅಧಿವೇಶನದಲ್ಲಿ ಕುಂಬಾರ ಸಮಾಜಕ್ಕೆ 100 ಕೋಟಿ ಅನುದಾನ ಘೋಷಣೆ ಮಾಡಿ ತಕ್ಷಣವೇ ಬಿಡುಗಡೆ ಮಾಡಬೇಕು. ಕುಂಬಾರ ಸಮಾಜದ ಅಭಿವೃದ್ಧಿಗಾಗಿ ಸರಕಾರ ನಮ್ಮ ಸಮಾಜಕ್ಕೆ ಹೆಚ್ಚಿನ ರೀತಿಯಲ್ಲಿ ಆದ್ಯತೆ ನೀಡಿ, ಅಧಿವೇಶನದಲ್ಲಿ ಸಮಾಜಕ್ಕೆ ಶುಭ ಸುದ್ದಿ ನೀಡಬೇಕೆಂದು ಒತ್ತಾಯಿಸಿದ್ದಾರೆ.