ಬಿಸಿ ಬಿಸಿ ಸುದ್ದಿ

ಚಿತ್ತಾಪುರ: ಮುಖ್ಯಗುರು ಅಮಾನತಿಗೆ ಒತ್ತಾಯ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ನಾಗಾವಿ ಕ್ಯಾಂಪಸ್‌’ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರು ಹಾಗೂ ಅಡುಗೆ ಸಿಬ್ಬಂದಿಯವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಆಗ್ರಹಿಸಿದ್ದಾರೆ.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ನೀಡಲ್ಲ. ಕಸಕಡ್ಡಿ ಹುಳಗಳು ಮಿಶ್ರಿತ ಆಹಾರ ನೀಡುತ್ತಾರೆ. ಅರೆಬರೆ ಕುದಿಸಿದ ಮೊಟ್ಟೆ ನೀಡುತ್ತಾರೆ, ಬೆಳೆ ಸಾಂಬಾರದಲ್ಲಿ ತರಕಾರಿ ಬಳಸದೆ ತಿಳಿಯಾಗಿರುತ್ತದೆ.

ಹಣ್ಣಾದ ಬಾಳೆಹಣ್ಣು ನೀಡದೆ ಖಗ್ಗಾದ ಹಣ್ಣನ್ನು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಮುಖ್ಯಗುರುಗಳು ಮಾತ್ರ ಗಮನ ಹರಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಸೀರಾದಲ್ಲಿ ಹುಳಗಳು ಕಂಡು ಮಕ್ಕಳು ತಿನ್ನದೇ ಆಕ್ಷೇಪಿಸಿದಾಗ ಈ ವಿಷಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಗುರುಗಳು ಮಾಡಿದ ಸೀರಾ ಹೊರಗಡೆ ಚೆಲ್ಲಿ ಕೈ ತೊಳೆದುಕೊಂಡಿರುವ ಘಟನೆ ನಡೆದಿತ್ತು.

ಆದಾದ ಮೇಲೆಯೂ ಯಾವುದೇ ಸುಧಾರಣೆ ಕಂಡಿಲ್ಲ. ನಿತ್ಯದ ಅಡುಗೆ ಸಿಬ್ಬಂದಿ ಅಕ್ಕಿ ಬೇಳಿಯನ್ನು ಸರಿಯಾಗಿ ಸ್ವಚ್ಛತೆ ಮಾಡದೇ ಹಾಗೆಯೇ ಮಾಡುತ್ತಿದ್ದರಿಂದ ನಿತ್ಯ ಕಸಕಡ್ಡಿ ಮಿಶ್ರಿತ ಬಿಸಿಯೂಟ ಸೇವನೆ ಮಾಡಬೇಕಾದ ಪರಿಸ್ಥಿತಿಯಿದೆ. ಆದ್ದರಿಂದ ಕೂಡಲೇ ಬೇಜವಾಬ್ದಾರಿ ಮುಖ್ಯಗುರು ಮತ್ತು ಅಡುಗೆ ಸಿಬ್ಬಂದಿಗಳನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕರವೇ ಪದಾಧಿಕಾರಿಗಳಾದ ಭಾಸ್ಕರ ಕರಿಚಕ್ರ, ಗಣೇಶ ರಾಠೋಡ, ಜಗದೀಶ್ ದಂಡೋತಿ, ಅಪ್ಸರ್ ಸೇಟ್, ಬಸವರಾಜ ದೇವಣಿ, ರಾಜಶೇಖರ ಗುತ್ತೇದಾರ, ದೇವಪ್ಪ ಯಾಗಾಪೂರ, ಆಸೀಫ್ ಇವಣಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago