ಕಲಬುರಗಿ: ಸಂಪಾದಕ ರಮೇಶ ಖಮಿತಕರ್ ನಿಧನ

0
71

ಕಲಬುರಗಿ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಚಾರ ಪ್ರಪಂಚ ಕನ್ನಡ ದಿನಪತ್ರಿಕೆಯ ಸಂಪಾದಕ‌ ರಮೇಶ ಖಮಿತಕರ್ (64) ಅವರು ಬುಧವಾರ ನಿಧನರಾಗಿದ್ದಾರೆ.

ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ 11.10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

Contact Your\'s Advertisement; 9902492681

ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಕಲಬುರಗಿ ನಗರದ ಗಂಜ್ ಪ್ರದೇಶದ ವಿ.ಆರ್.ಎಲ್. ಕಚೇರಿ ಬಳಿಯಿರುವ ರುದ್ರ ಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here