ಬಿಸಿ ಬಿಸಿ ಸುದ್ದಿ

ಬಣಗಾರಗೆ ಲೇಖನಿ ತಪಸ್ವಿ, ಭವಾನಿಸಿಂಗ್‌ಗೆ ಚೇತನ ಶ್ರೀ ಪ್ರಶಸ್ತಿ ಪ್ರದಾನ

ಔರಾದ್‌ನಲ್ಲಿ ನಾಳೆ ಪತ್ರಿಕಾ ದಿನಾಚರಣೆ

ಔರಾದ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಿನಾಚರಣೆ ಹಾಗೂ ಲೇಖನಿ ತಪಸ್ವಿ ಮತ್ತು ಚೇತನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ ೧೯ ರಂದು ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಸುಭಾಷ್ ಬಣಗಾರ ಅವರಿಗೆ ಲೇಖನಿ ತಪಸ್ವಿ ಪ್ರಶಸ್ತಿ ಹಾಗೂ ಹಿರಿಯ ಪತ್ರಕರ್ತರು, ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಮಾಣಿಕಸಿಂಗ್ ಠಾಕೂರ್ ಅವರಿಗೆ ಚೇತನ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಸುಭಾಷ್ ಬಣಗಾರ ಅವರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ರುಕ್ಮಾಪುರ ಗ್ರಾಮದವರಾಗಿದ್ದು, ಬೆಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಎಂ.ಎ ಪದವಿ ಪಡೆದು ವಿವಿಧ ಪತ್ರಿಕೆಗಳಲ್ಲಿ ಸಂಪಾದಕರಾಗಿ, ಉಪ ಸಂಪಾದಕರಾಗಿ ಮೂರು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ.

ಕಲಬುರಗಿಯ ಆಕಾಶವಾಣಿ ಕೇಂದ್ರದಲ್ಲಿ ೨೫ ವರ್ಷಗಳಿಂದ ನಿಯಮಿತವಾಗಿ ಹೊಸ ಓದು ಪುಸ್ತಕ ಪರಿಚಯ ಕಾರ್ಯಕ್ರಮ ನಡೆಸಿಕೊಡುತ್ತಿದ್ಧಾರೆ. ಕಲಬುರಗಿ ದೂರದರ್ಶನ ಕೇಂದ್ರಕ್ಕೆ ನೇರ ಫೋನ್ ಇನ್ ಕಾರ್ಯಕ್ರಮದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರೊಂದಿಗೆ ಸಂದರ್ಶನ ನಡೆಸಿ ಕೊಟ್ಟಿದ್ದಾರೆ.

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ವಿವಿಧ ಕಾಲೇಜು, ವಿವಿಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರೆಂದು ಪ್ರಖ್ಯಾತಿ ಹೊಂದಿದ್ದಾರೆ.

ಈ ಸಂಭಾಷಣೆ, ಬಯಲು ಗ್ರಂಥಾಲಯ, ಮಾಧ್ಯಮ ಮಾರ್ಗ, ಶತಮಾನದ ದೇಗುಲ ಕೃತಿಗಳನ್ನು ರಚಿಸಿದ್ದಾರೆ. ಓದುವ ಹವ್ಯಾಸ ಹೆಚ್ಚಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ಬಯಲು ಗ್ರಂಥಾಲಯ ಪ್ರಾರಂಭಿಸಿದ್ದಾರೆ. ಇವರು ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಗಳಿಂದ ವಿವಿಧ ಸಂಘ ಸಂಸ್ಥೆಗಳು ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇವರು ಬರೆದ ಅತ್ಯುತ್ತಮ ಕಳಕಳಿಯ ಲೇಖನಕ್ಕೆ ಮಾಧ್ಯಮ ಅಕಾಡೆಮಿಯ ಅಭಿಮಾನಿ ಪ್ರಶಸ್ತಿ ದೊರಕಿದೆ. ಕಲಬುರಗಿಯಲ್ಲಿ ನಡೆದ ಸ್ವಾತಂತ್ರ್ಯೊತ್ಸವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸನ್ಮಾನಿಸಿ ಗೌರವಿಸಿದ್ದಾರೆ.

ಭವಾನಿಸಿಂಗ್ ಠಾಕೂರ್ ಅವರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಸಿಟಿವಿ ಕೇಬಲ್ ಪ್ರಾರಂಭಿಸುವ ಮೂಲಕ ಸ್ಥಳಿಯ ಸುದ್ದಿಗಳಿಗೆ, ಸಮಸ್ಯೆಗಳಿಗೆ ಆದ್ಯತೆ ನೀಡಿ ಮನೆ ಮಾತಾಗಿದ್ದಾರೆ. ಇವರ ಕೇಬಲ ನೆಟ್‌ವರ್ಕ್‌ನಲ್ಲಿ ಕಲಿತ ನೂರಾರು ವಿದ್ಯಾರ್ಥಿಗಳು ಇಂದು ರಾಜ್ಯಮಟ್ಟದ ಚಾನೆಲ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಚಿತ್ರ ಸುದ್ದಿ ಎಂಬ ಸಂಜೆ ಪತ್ರಿಕೆಯನ್ನು ಆರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಪತ್ರಕರ್ತರ ಸಂಘಟನೆ ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.

ಜುಲೈ ೧೯ರಂದು ಬೆಳಿಗ್ಗೆ ೧೦.೩೦ಕ್ಕೆ ಶಾಸಕ ಪ್ರಭು ಚವ್ಹಾಣ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಸಾಗರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸುವರು. ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸುವರು. ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ, ಇಓ ಬಿರೇಂದ್ರಸಿಂಗ್ ಠಾಕೂರ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್ ಭಾಗವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವಂತೆ ಸಂಘದ ತಾಲ್ಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago