ಬಿಸಿ ಬಿಸಿ ಸುದ್ದಿ

ಸಿಎಚ್‍ಒಗಳ ಸೇವೆ ಕಾಯಂಗೆ ಮನವಿ

ಕಲಬುರಗಿ: ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಕಾಯಂ ಮಾಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‍ಎಚ್‍ಎಂ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಮಮಿತ ಗಾಯಕವಾಡ ಹಾಗೂ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಅರೋಗ್ಯ ಏನ್ ಎಚ್ ಎಮ್ ಗುತ್ತಿಗೆ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ನೂಲಕರ್ ಜಂಟಿಯಾಗಿ ಮನವಿ ಮಾಡಿದ್ದಾರೆ.

ಸಿಎಚ್‍ಒಗಳ ಬೇಡಿಕೆಗೆ ಸ್ಪಂದಿಸಿರುವ ಆರೋಗ್ಯ ಇಲಾಖೆಯು ತನ್ನ ಅವಧಿಯಲ್ಲಿ ಶೇ 5ರಷ್ಟು ವಾರ್ಷಿಕ ವೇತನದ ಹೆಚ್ಚಳ ಬಿಡುಗಡೆಗೆ ಆದೇಶ ಹೊರಡಿಸಿದೆ. ಈ ಹಿಂದಿನ ವರ್ಷಗಳ ವೇತನ ಹೆಚ್ಚಳದ ಜತೆಗೆ ಲಾಯಲ್ಟಿ ಬೋನಸ್ ಸಹ ಬಿಡುಗಡೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಶೇ 5ರಷ್ಟು ವಾರ್ಷಿಕ ವೇತನ ಹೆಚ್ಚಳದ ಬೇಡಿಕೆಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ ಸ್ಪಂದಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗೂ ಮುಂದಾಗಬೇಕು. ವಿನಾಕಾರಣ ವಜಾಗೊಳಿಸಿದ ಎಲ್ಲ ಸಿಎಚ್‍ಒಗಳನ್ನು ಮರು ನಿಯೋಜನೆ ಮಾಡಬೇಕು. ರೂ.15 ಸಾವಿರ ಮಾಸಿಕ ಪೆÇ್ರೀತ್ಸಾಹ ಧನ ಪಾವತಿಸಬೇಕು. ಸಿಎಚ್‍ಒಗಳ ಕುಟುಂಬಸ್ಥರಿಗೆ ಆರೋಗ್ಯ ವಿಮೆ ಹಾಗೂ ಪಿಎಫ್ ಒದಗಿಸಬೇಕು ಎಂದು ಕೋರಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago