ಕಲಬುರಗಿ : ಇದೇ ತಿಂಗಳು ಜುಲೈ 22 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇ- ರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಶಾಂತಗೌಡ ಆರ್. ಮಾಲಿಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಕೃಷಿ ಹೊಂಡ ಡ್ರಿಪ್ ಪೈಪ್ ಲೈನ್ ಮತ್ತು ರೈತರು ಉಪಯೋಗಿಸುವ ಕೃಷಿ ಸಲಕರಣೆಗಳ ಸಬ್ಸಿಡಿ ದರವನ್ನು ಪರಿಷ್ಕರಣೆ ಮಾಡಬೇಕು ರಾಜ್ಯ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡು ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಬೆಂಗಳೂ- ರಿನ ಶಾಪಿಂಗ್ ಜೆ.ಟಿ ಮಾಲ್‍ನಲ್ಲಿ ರೈತನಿಗೆ ಅವಮಾನಿಸಿದ್ದು, ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುವುದು.
ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ರೈತರ ಪಂಪ್ ಸೆಟ್ಟುಗಳಿಗೆ ಉಚಿತ ಪರಿಕರಗಳನ್ನು ಎತ್ತರಿಸಬೇಕು ರಾಜ್ಯದ ಮೂರು ನೀರಾವರಿ ಯೋಜನೆಗಳಾದ ಮಹದಾಯಿ, ಬೆಣ್ಣೆ ಹಳ್ಳ, ಮೇಕೆದಾಟು ಯೋಜನೆ ಜಾ- ರಿಗೆ ಒತ್ತಾಯಿಸಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಜಿಲ್ಲೆಯ ರೈತರು ನಮ್ಮೊಂದಿಗೆ ಕೈಜೋಡಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಬೆಂಬಲಿಸಿ ಯಶಸ್ವಿಗೊಳಿಸುವಂತೆ ಮಾಲಿಪಾಟೀಲ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…