ಬಿಸಿ ಬಿಸಿ ಸುದ್ದಿ

ಉದ್ಯೋಗ ಮಾರುಕಟ್ಟಯಲ್ಲಿ ಕಾಮರ್ಸ್ ಬಹುಬೇಡಿಕೆಯ ವಿಷಯ: ಉಮಾ ರೇವೂರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರಥಮ ಮತ್ತು ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಿಗೋಸ್ಕರ ವಿಶೇಷಸ್ಪೂರ್ತಿದಾಯಕ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯದ ಉಪ-ಪ್ರಾಚಾರ್ಯರು ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ. ಉಮಾ ರೇವೂರ ಅವರು ಆಗಮಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

ಶ್ರೀಮತಿ. ಉಮಾ ರೇವೂರ ಅವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಉದ್ಯೋಗ ಮಾರುಕಟ್ಟಯಲ್ಲಿ ಕಾಮರ್ಸ್ ಬಹುಬೇಡಿಕೆಯ ವಿಷಯವಾಗಿದೆ, ನೀವು ಪಿಯುಸಿಯಲ್ಲಿ ಕಾಮರ್ಸ್ ಚೆನ್ನಾಗಿ ಓದಿದರೆ ಮುಂದೆ ಹಲವಾರು ವೃತ್ತಿಪರ ಕೋಸ್ರ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಾಣಿಜ್ಯ ಕ್ಷೇತ್ರದಲ್ಲಿ ಅಂತಹ ಕೆಲವು ಕೋಸ್ರ್ಗಳಿವೆ, ಅದನ್ನು ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಯು ವೃತ್ತಿಜೀವನದ ದೃಷ್ಟಿಯಿಂದ ಸಾಕಷ್ಟು ಹಣ ಮತ್ತು ಪ್ರತಿಷ್ಠೆಯನ್ನು ಗಳಿಸಬಹುದು. ಈ ಕೋಸ್ರ್ಗಳನ್ನು ಮಾಡಿದ ನಂತರ, ಉದ್ಯೋಗಕ್ಕಾಗಿ ವಿದೇಶದಲ್ಲಿ ನೆಲೆಸುವ ಅವಕಾಶವನ್ನೂ ಕೂಡ ಪಡೆಯಬಹುದು ಎಂದು ಸ್ಪೂರ್ತಿದಾಯಕ ವಿಶೇಷ ಉಪನ್ಯಾಸವನ್ನು ನೀಡಿದರು.

ಇದೆ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಅವರು ಮಾತನಾಡುತ್ತ ಮೇಡಮ ಅವರು ಹೇಳಿರುವ ಹಾಗೆ ವಾಣಿಜ್ಯ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಮತ್ತು ದ್ವಿತೀಯ ಪಿಯುಸಿಯ ನಂತರ ಆಯ್ಕೆ ಮಾಡಲು ಲಭ್ಯವಿರುವ ವಿವಿಧ ಕೋರ್ಸ್‍ಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರಬೇಕು. ವಾಣಿಜ್ಯ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಆಯ್ಕೆಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಮುಂದೆ ತಮ್ಮ ವೃತ್ತಿ ಜೀವನವನ್ನು ಆಯ್ಕೆ ಮಾಡಿಕೊಳ್ಳಲು ನಿಮಗೆ ತುಂಬಾ ಸಹಾಯವಾಗುತ್ತದೆ. ನೀವೆಲ್ಲಾ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿದರೆ ಖಂಡಿತ ಮುಂದೆ ಒಳ್ಳೆ ಹುದ್ದೆ ಸೇರಿಕೊಳ್ಳವುದರಲ್ಲಿ ಯಾವುದೇ ರೀತಿಯಾದ ಸಂಶಯವಿಲ್ಲ ಎಂದು ನುಡಿದರು.

ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀಮತಿ. ರಶ್ಮಿ ಸ್ವಾಮಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲರನ್ನು ಸ್ವಾಗತಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ ಫಾತೀಮಾ ಶಾನಂ ಉಪನ್ಯಾಸದಿಂದ ಪ್ರೇರೆಪಿತಳಾಗಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿನಿಯಾದÀ ಕುಮಾರಿ. ಬಸಮ್ಮ ಎಲ್ಲರನ್ನು ವಂದಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದÀ ಡಾ. ಕಾಶೀಬಾಯಿ, ಶ್ರೀಮತಿ ಸಂತೋಷಿ ಕೆ, ಶ್ರೀಮತಿ ಪ್ರೀಯಾ ಎನ್, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು ಎಂದು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು ಹಾಗೂ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಬಸವರಾಜ ಗೋಣಿ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago