ಮಾನವಿಕ ಅಧ್ಯಯನ ವಿಷಯಗಳ ಜ್ಞಾನದ ಮುಖಾಂತರ ಸಮಾಜಕ್ಕೆ ಕೊಡುಗೆ ನೀಡಬಹುದ

0
54

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರಥಮ ಮತ್ತು ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕಲಾ ವಿಭಾಗದ ವಿದ್ಯಾರ್ಥಿನಿಯರಿಗೋಸ್ಕರ ವಿಶೇಷ ಸ್ಪೂರ್ತಿದಾಯಕ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಲಾಗಿತ್ತು.

ಸದರಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯಗಳಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ. ನರೇಂದ್ರ ಬಡಶೇಷಿ ಅವರು ಆಗಮಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

Contact Your\'s Advertisement; 9902492681

ಪ್ರೊ. ನರೇಂದ್ರ ಬಡಶೇಷಿ ಅವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯದ ಜೊತೆಗೆ, ಮಾನವಿಕ ಅಧ್ಯಯನಗಳನ್ನು ಪರಿಣಾಮಕಾರಿ ಅಧ್ಯಯನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಮಾನವಿಕ ಅಧ್ಯಯನ ಹೆಚ್ಚಾಗಿ ತಾತ್ವಿಕ, ಐತಿಹಾಸಿಕ ಮತ್ತು ಪುರಾತತ್ವ ಅಧ್ಯಯನಗಳನ್ನು ಒಳಗೊಂಡಿದೆ. ಅಲ್ಲದೆ ಇದು ಕಾನೂನು, ರಾಜಕೀಯ, ಧರ್ಮ ಮತ್ತು ಭೂಗೋಳದಲ್ಲಿ ಹೆಚ್ಚಿನ ಪ್ರಸ್ತುತತೆಯನ್ನು ಹೊಂದಿದೆ. ಮಾನವಿಕ ಅಧ್ಯಯನ ವಿಷಯಗಳ ಜ್ಞಾನದ ಮುಖಾಂತರ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ವಿದ್ಯಾರ್ಥಿನಿಯರಿಗೆ ಪ್ರೇರೆಪಿಸಿ ಮಾತನಾಡಿದರು.

ಇದೆ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರೊ. ನರೇಂದ್ರ ಬಡಶೇಷಿ ಅವರನ್ನು ಪರಿಚಯಿಸಿ ಎಲ್ಲರನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡುತ್ತ ಸರ್ ಅವರು ಹೇಳಿರುವ ಹಾಗೆ ಕಲಾ ವಿಭಾಗದ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ಮತ್ತು ದ್ವಿತೀಯ ಪಿಯುಸಿಯ ನಂತರ ಆಯ್ಕೆ ಮಾಡಲು ಲಭ್ಯವಿರುವ ವಿವಿಧ ಕೋರ್ಸ್ಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಇರುವ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಉನ್ನತ ಗುರಿಯತ್ತಾ ಸಾಗಿರಿ ಎಂದರು.

ಮುಂದುವರೆದು ಮಾತನಾಡುತ್ತಾ ನೀವೆಲ್ಲಾ ವಿದ್ಯಾರ್ಥಿಗಳು ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುತ್ತಾ ತಲೆ ತಗ್ಗಿಸಿ ಓದುವದನ್ನು ಮಾಡಿದರೆ ಮುಂದೆ ಅದರ ಫಲ ನಿಮ್ಮನ್ನು ತಲೆ ಎತ್ತುವಂತೆ ಮಾಡುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದÀ ಡಾ. ಕಾಶೀಬಾಯಿ ಬೋಗಶೆಟ್ಟಿ, ಡಾ. ನಯನತಾರ ಆಸ್ಪಲ್ಲಿ, ಶೈಲಜಾ ನಾಕೇದಾರ. ಮಹಾನಂದಾ ಗೊಬ್ಬುರ, ಶ್ರೀಮತಿ ಕನ್ಯಾಕುಮಾರಿ ಗಂಧಿಗುಡಿ, ಬಸವರಾಜ ಗೋಣಿ, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಕಲಾ ವಿಭಾಗದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ವಿದ್ಯಾರ್ಥಿ ಸಂಘದ ಸಲಹೆಗಾರರಾದ ಡಾ. ಕಾಶೀಬಾಯಿ ಬೋಗಶೆಟ್ಟಿ ಅವರು ವಂದಿಸಿದರು ಎಂದು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು ಹಾಗೂ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಶ್ರೀ. ಬಸವರಾಜ ಗೋಣಿ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here