ಕಲಬುರಗಿ: 12ನೇ ಶತಮಾನದ ಸಾಮಾಜಿಕ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಕೂಡ ಒಬ್ಬರಾಗಿದ್ದರು ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.
ಅವರು ರಾವೂರ ಗ್ರಾಮದ ಶ್ರೀಮಠದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬಸವಣ್ಣನವರ ಬಲಗೈ ಬಂಟರಾಗಿ ಅವರ ಜೊತೆ ಜೊತೆಗೆ ಸಾಮಾಜಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಕಾರ್ಯದರ್ಶಿಯಾಗಿ ಕಾಯಕಕ್ಕೆ ಯಾವ ಚ್ಯುತಿ ಬರದಂತೆ ಸೇವೆ ಮಾಡಿ ಅವರ ಮೆಚ್ಚುಗೆ ಪಡೆದರು.
ಅನುಭವ ಮಂಟಪಕ್ಕೆ ಯಾರೇ ಬಂದರೂ ಹಡಪದ ಅಪ್ಪಣ್ಣ ಅವರನ್ನು ಭೇಟಿ ಮಾಡಿ ಬರುವಂತೆ ಹೇಳುತ್ತಿದ್ದರು. ತಮ್ಮ ವಚನಗಳ ಮೂಲಕ ಸಮಾಜದ ಮೌಢ್ಯತೆಯನ್ನು, ಕಂದಾಚಾರಣೆಗಳನ್ನು, ಅನಿಷ್ಟ ಪದ್ಧತಿಗಳನ್ನು ಜನರ ಮನಸ್ಸಿನಿಂದ ದೂರ ಮಾಡುವ ಪ್ರಯತ್ನ ಮಾಡಿದರು. ಅವರ ವಿಚಾರಗಳು ಇವತ್ತಿನ ಸಮಾಜಕ್ಕೆ ಪ್ರಸ್ತುತ. ಜೀವಪರ ಕಾಳಜಿ ಹೊಂದಿದ್ದ ಶರಣರು ನಮ್ಮೆಲ್ಲರಿಗೂ ಆದರ್ಶ ಎಂದು ಹೇಳಿದರು.
ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿದರು. ಹಡಪದ ಸಮಾಜದ ಪ್ರಮುಖರಾದ ಶಂಕರ ಹಡಪದ, ಮಹಾದೇವ ಹಡಪದ, ರಾಮಚಂದ್ರ ಹಡಪದ, ಬಸವರಾಜ ಹಡಪದ, ಶಿವರಾಜ ಹಡಪದ, ಅಣ್ಣೆಪ್ಪ ಹಡಪದ, ಮಲ್ಲಿಕಾರ್ಜುನ ಹಡಪದ, ಬಾಗಣ್ಣ ಹಡಪದ, ಸಿದ್ದಣ್ಣ ಹಡಪದ, ನಿಂಗಣ್ಣ ಹಡಪದ, ಸೋಮಶೇಖರ ಸೂಲಹಳ್ಳಿ, ಸೋಮಶೇಖರ್ ಬಾಳಿ, ದತ್ತು ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬಿ.ಆರ್. ಪಾಟೀಲರ 76ನೇ ಹುಟ್ಟುಹಬ್ಬದ ಆಚರಣೆ ನಿಮಿತ್ತ ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ…
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…