ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಸುಟ್ಟ ಪರಿವರ್ತಕವನ್ನು ತೆಗೆದು ಹೊಸ ಪರಿವರ್ತಕವನ್ನು ರಅಳವಡಿಸಲಾಗಿದೆ,ಬೇರೆ ಯಾವುದೇ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಬೇಕಿದ್ದರೆ ದೂರು ನೀಡುವಂತೆ ಜೆಸ್ಕಾಂನ ಶೋರಾಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೊಹಮದ್ ರಫಿಕ್ ತಿಳಿಸಿದ್ದಾರೆ.
ನಗರದ ರಂಗಂಪೇಟೆಯ ಜೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳ ಸನ್ಮಾನ ಸ್ವೀಕರಿಸಿ ಮಾತನಾಡಿ, ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಸುಟ್ಟ ವಿದ್ಯುತ್ ಪರಿವರ್ತಕ ಬದಲಾಯಿಸುವಂತೆ ಆಗ್ರಹಿಸಿ ಪರಿಶಿಷ್ಟರ ಕಾಲೋನಿಯ ಮಹಿಳೆಯರು ಖಾಲಿ ಕೊಡ ಹಿಡಿದು ನಗರದ ತಾಲೂಕ ಪಂಚಾಯಿತಿ ಮುಖ್ಯ ದ್ವಾರಕ್ಕೆ ಮುಳ್ಳು ಬೇಲಿ ಬಡಿದು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ತಾ. ಪಂ. ಇಒ ಹಾಗೂ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಇಂದೇ ಪರಿವರ್ತಕವನ್ನು ಅಳವಡಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಸುಟ್ಟ ವಿದ್ಯುತ್ ಪರಿವರ್ತಕವನ್ನು ತೆಗೆದು ಹೊಸ ಪರಿವರ್ತಕವನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು..
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ ಸಂಖ್ಯೆ 1912ಗೆ ಸಂಪರ್ಕಿಸಿ. ಇಲ್ಲವಾದರೆ 9480847593 ವಾಟ್ಸ್ಪ್ ಸಂಖ್ಯೆಯ ಮೂಲಕ ತಮ್ಮ ದೂರನ್ನು ನೊಂದಾಯಿಸಿಕೊಳ್ಳಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಇ ಸುನೀಲ್ ಕುಮಾರ್, ಕ್ಯಾಷಿಯರ್ ಮೈಲಾರ ಲಿಂಗ ದೇವಾಪುರ, ಗುತ್ತೇಗೆದಾರ್ ಅಯ್ಯಪ್ಪ ಅಕ್ಕಿ, ಲೈನ್ ಮೇನ್ ಗಳಾದ ಕೊಟ್ರಪ್ಪ ಮಿಣಜಗಿ, ವೆಂಕಟೇಶ್ ಕಾಗೆ,ಏಕನಾಥ ಪುಲ್ಸೆ,ಸಂತೋಷ ಇಬ್ರಾಂಪುರ,ನೀಲಕಂಠ ಶಹಾಪುರ ,ಭೀಮುನಾಯಕ ಸೇರಿದಂತೆ ಇತರರು ನೂತನ ಎಇಇ ಅವರನ್ನು ಸನ್ಮಾನಿಸಿ ಗೌರವಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…