ಸುರಪುರ:ತಾಲೂಕಿನ ದೇವಾಪುರ ಗ್ರಾಮಕ್ಕೆ ಪ್ರತ್ಯೇಕ ವಿದ್ಯುತ್ ಲೈನ್ ಅಳವಡಿಸುವಂತೆ ಆಗ್ರಹಿಸಿ ದೇವಾಪುರ ಗ್ರಾಮದ ಮುಖಂಡರು ಒತ್ತಾಯಿಸಿದರು.
ನಗರದ ರಂಗಂಪೇಟೆಯ ಜೆಸ್ಕಾಂ ಇಲಾಖೆಯ ವಿಭಾಗಿಯ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಬಿಳಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ,ದೇವಾಪುರ ಗ್ರಾಮದಲ್ಲಿಯೇ 110 ಕೆ.ವಿ ವಿದ್ಯುತ್ ವಿತರಣೆ ಕೇಂದ್ರವಿದೆ,ಇದರಿಂದ ಶೆಳ್ಳಗಿ,ಮುಷ್ಠಳ್ಳಿ,ತಿಂಥಣಿ ಸೇರಿದಂತೆ ವಿವಿಧ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ,ಆದರೆ ದೇವಾಪುರ ಗ್ರಾಮಕ್ಕೆ ಸರಿಯಾಗಿ ವಿದ್ಯುತ್ ವಿತರಣೆಯಾಗುತ್ತಿಲ್ಲ,ಇದರಿಂದ ಗ್ರಾಮದ ಜನರಿಗೆ ತೊಂದರೆಯಾಗುತ್ತಿದೆ.ಆದ್ದರಿಂದ ದೇವಾಪುರ ಗ್ರಾಮಕ್ಕೆ ಈ ಕೇಂದ್ರದಿಂದ ಪ್ರತ್ಯೇಕ್ ಲೈನ್ಗಳನ್ನು ಅಳವಡಿಸಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ನೂತನವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಜೆಸ್ಕಾಂ ಇಇ ರಾಜಶೇಖರ ಬಿಳಾರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮುಖಂಡರಾದ ಕಾಂಗ್ರೆಸ್ ಕಿಸಾನ್ ಘಟಕದ ತಾಲೂಕ ಅಧ್ಯಕ್ಷ ಚನ್ನಪ್ಪಗೌಡ ಜಕ್ಕನಗೌಡ್ರ್,ಸಂತೋಷ ಬಾಗಲಿ,ಮಹಾದೇವ ಚಲುವಾದಿ,ಗೋಪಾಲ ಕುಲಕರ್ಣಿ ಹಾಗೂ ಜೆಸ್ಕಾಂ ಇಲಾಖೆ ಕಿರಿಯ ಅಭಿಯಂತ ಚಂದ್ರಶೇಖರ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…