ಬಿಸಿ ಬಿಸಿ ಸುದ್ದಿ

ಕಮಲಾಪುರ ಜನಸ್ಪಂದನ: 21 ಜನರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರು

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಮಲಾಪುರ ಪಟ್ಟಣದ ಕೋಹಿನೂರ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದಲ್ಲದೆ ಸ್ಥಳದಲ್ಲಿಯೇ 21 ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಆದೇಶ ಪತ್ರ ವಿತರಣೆ ಮಾಡಿದರು.

ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಸುಮಾರು 120 ಅರ್ಜಿಗಳ ಪೈಕಿ ಪಿಂಚಣಿಗೆ ಸಂಬಂಧಿಸಿದ 21 ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಇದರಲ್ಲಿ ವಿಧವಾ ವೇತನ, ವಿಶೇಷ ಚೇತನ ವೇತನ, ಸಂಧ್ಯಾ ಸುರಕ್ಷಾ ವೇತನ, ಹಿರಿಯ ನಾಗರಿಕರ ವೇತನ ಪಿಂಚಣಿ ಸೇರಿವೆ. ಇನ್ನುಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಯಿತು.

ಇದೇ‌ ಸಂದರ್ಭದಲ್ಲಿ ಪ್ರಧಾನಮಂತ್ರಿ-ಕರ್ನಾಟಕ ಫಸಲ್‌ ಬಿಮಾ ಬೆಳೆ ವಿಮೆ ಯೋಜನೆಯಡಿ ನೊಂದಣಿಗೆ ರೈತರಿಗೆ ಕರೆ ನೀಡಿದ ಜಿಲ್ಲಾಧಿಕಾರಿಗಳು ಬೆಳೆ ವಿಮೆ ಕುರಿತು ಪೋಸ್ಟರ್ ಬಿಡುಗಡೆಗೊಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಇದ್ದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ರೂಪಿಂದರ್ ಸಿಂಗ್ ಕೌರ್, ತಹಶೀಲ್ದಾರ ಮೊಹಮ್ಮದ್ ಮೋಹಸಿನ್, ಎ.ಸಿ.ಪಿ ಬಿಂದುರಾಣಿ, ಗ್ರೇಡ್-2 ತಹಶೀಲ್ದಾರ ಗಂಗಾಧರ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಇದ್ದರು.

ಕಾಳಗಿಯಲ್ಲಿಯೂ ಜನಸ್ಪಂದನಾ ಸಭೆ,ಸೌಲಭ್ಯ ವಿತರಣೆ: ಮಂಗಳವಾರ ಕಾಳಗಿ ಪಟ್ಟಣದ ಕಾಳೇಶ್ವರ ದೇವಸ್ಥಾನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಭಾಗಿಯಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾದರು. ಶಾಂತಚಿತ್ತದಿಂದ ಪ್ರತಿಯೊಬ್ಬರ ಸಮಸ್ಯೆ ಆಲಿಸಿ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೆ ಮುಕ್ತಿ ನೀಡಿದರು.

ಒಟ್ಟಾರೆ 83 ಅರ್ಜಿ‌ ಸಲ್ಲಿಕೆಯಾದವು. ಇದೇ ಸಂದರ್ಭದಲ್ಲಿ ಎ.ಬಿ.ಆರ್.ಕೆ. ಆರೋಗ್ಯ ಕಾರ್ಡ್, ಪಿಂಚಣಿ ಮಂಜೂರಾತಿ ಆದೇಶ, ಪಡಿತರ ಚೀಟಿ, ಪೌರ ಕಾರ್ಮಿಕರಿಗೆ ರೇನ್ ಕೋಟ್, ಸುಕನ್ಯಾ ಸಮೃದ್ಧಿ ಪಾಸ್ ಬುಕ್ ವಿತರಣೆ ಮಾಡಲಾಯಿತು. ತಹಶೀಲ್ದಾರ ಘಮಾವತಿ ರಾಠೋಡ, ತಾಲೂಕ ಪಂಚಾಯತ್ ಇ.ಓ ವಿಲಾಸರಾಜ ಸೇರಿದಂತೆ ಅನೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago