ಬಿಸಿ ಬಿಸಿ ಸುದ್ದಿ

ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ: ಉಭಯ ಸದನಗಳಲ್ಲಿ ತೀರ್ಮಾನ

ನೀಟ್ ಪರೀಕ್ಷೆ ವಿರುದ್ಧ ನಿರ್ಣಯ ಅಂಗೀಕರ: ನಿರ್ಣಯ ಮಂಡಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು.

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

ಸಭಾಧ್ಯಕ್ಷ ಯು ಟಿ ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಪರಿಷತ್ನಲ್ಲೂ ಅಂಗೀಕಾರ: ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.

ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago