ಬಿಸಿ ಬಿಸಿ ಸುದ್ದಿ

ರಾಜಶ್ರೀ ಛತ್ರಪತಿ ಶಾಹುಜಿ ಮಹಾರಾಜರವರ ೧೫೧ನೇ ಜನ್ಮದಿನ ಜುಲೈ ೨೭.ರಂದು

ಕಲಬುರಗಿ: ಅಂಬೇಡ್ಕರ್ ಸ್ಟುಡೆಂಟ್ ಅಸೋಸಿಯೇಷನ್ (ಎಎಸ್‌ಎ) ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸುವರ್ಣ ಕನ್ನಡ ಭವನದಲ್ಲಿ, ರಾಜಶ್ರೀ ಛತ್ರಪತಿ ಶಾಹುಜಿ ಮಹಾರಾಜರವರ ೧೫೧ನೇ ಜನ್ಮದಿನದ ಅಂಗವಾಗಿ “ಹಿಂದುಳಿದ ವರ್ಗ(ಒಬಿಸಿ)ಗಳ ಮೀಸಲಾತಿ ಮುಂದಿರುವ ಸವಾಲುಗಳು” ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಜುಲೈ ೨೭.ರಂದು ಶನಿವಾರ ಬೆಳಗ್ಗೆ ೧೧:೦೦ ಗಂಟೆಗೆ ಕಾರ್ಯಕ್ರಮವನ್ನು ಗುಲಬರ್ಗಾ ವಿಶ್ವವಿದ್ಯಾಲಯ ಕುಲಸಚಿವರಾದ ಪ್ರೊ. ಲಕ್ಷ್ಮಣ ರಾಜನಾಳಕರ್‌ರವರು ಉದ್ಘಾಟಿಸಲಿದ್ದು, ವಿಶೇಷ ಆಹ್ವಾನಿತರಾಗಿ ಶಿವಸುಂದರ ಖ್ಯಾತ ಚಿಂತಕರು, ಬೆಂಗಳೂರು ಹಾಗೂ ಪಿ. ಆರಡಿಮಲ್ಲಯ್ಯ ಕಟ್ಟೆರ ಸಂಶೋಧಕರು, ಶಿವಮೊಗ್ಗ ಭಾಗವಹಿಸಲಿದ್ದಾರೆ.

ಅದರಂತೆ ಜಿಲ್ಲೆಯ ವಿವಿಧ ವರ್ಗ/ಸಮುದಾಯಗಳ ಮುಖಂಡರು, ಅಧಿಕಾರಿಗಳು ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಶೇಖರ ಏಕಲೂರೆ ರವರು ವಹಿಸುವರು ಎಂದು ಅಂಬೇಡ್ಕರ್ ಸ್ಟುಡೆಂಟ್ ಅಸೋಸಿಯೇಷನ್ (ಎಎಸ್‌ಸಿ) ಕರ್ನಾಟಕ ಜಿಲ್ಲಾ ಘಟಕವು ಪ್ರಕಟಣೆಯಲ್ಲಿ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago