ಬಿಸಿ ಬಿಸಿ ಸುದ್ದಿ

ಯುವಕರು ದೇಶಭಕ್ತಿ ಮೈಗೂಡಿಸಿಕೊಂಡು ಸೇವೆ ಸಲ್ಲಿಸಿ

ಕಲಬುರಗಿ: ಯುವಕರು ಯಾವುದೇ ಹುದ್ದೆ ಆಯ್ಕೆ ಮಾಡಿಕೊಳ್ಳಿ, ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ. ಆದರೆ, ತಮ್ಮ ವೃತ್ತಿಯ ಗೌರವದ ಜೊತೆಗೆ ದೇಶಭಕ್ತಿ ಮೈಗೂಡಿಸಿಕೊಂಡು ದೇಶ ಸೇವೆ ಮಾಡಬೇಕು. ನಿಗದಿತ ಗುರಿಯನ್ನು ನಿರ್ಧರಿಸಿ, ನಿರಂತರ ಪ್ರಯತ್ನ ಮಾಡುವ ಮೂಲಕ ಉನ್ನತ ಸಾಧನೆ ಮಾಡಬೇಕು. ತಮ್ಮ ಜೀವದ ಹಂಗನ್ನು ತೊರೆದು ದೇಶಕ್ಕಾಗಿ ಸೇವೆ ಸಲ್ಲಿಸುವ ಸೈನಿಕರಿಗೆ ಗೌರವ ನೀಡಿ. ಎಂದು ಕಾರ್ಗಿಲ್ ಯೋಧ ಶಿವಶರಣಪ್ಪ ಎಸ್. ತಾವರಖೇಡ ಯುವಕರಿಗೆ ಸಲಹೆ ನೀಡಿದರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ‘ಕಾರ್ಗಿಲ್ ವಿಜಯ ದಿವಸ’ದ ೨೫ನೇ ವರ್ಷದ ರಜತ ಸಂಭ್ರಮಾಚರಣೆಯ ‘ಯೋಧರಿಗೊಂದು ಸಲಾಂ’ ವಿಶೇಷ ಕಾರ್ಯಕ್ರಮದಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಯೋಧರು ಹಿಮಾವೃತ ಪ್ರದೇಶ, ವಿಪರಿತ ಚಳಿ, ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿಯೂ ಜೀವದ ಹಂಗನ್ನು ತೊರೆದು, ತಮ್ಮ ಕುಟುಂಬದ ಬಗ್ಗೆ ಚಿಂತಿಸದೆ, ಹಗಲು-ರಾತ್ರಿಯೆನ್ನದೇ ದೇಶದ ರಕ್ಷಣೆಗೆ ಸದಾ ಕಂಕಣಬದ್ಧವಾಗಿ ಅಮೂಲ್ಯವಾದ ಸೇವೆಯನ್ನು ಸಲ್ಲಿಸುವ ಸೈನಿಕರಿಗೆ ದೇಶವೇ ತಮ್ಮ ಪರಿವಾರವೆಂಬ ಭಾವನೆಯಿರುತ್ತದೆ.

ಭಾರತೀಯರ ಸೈನಿಕರು ವಿಶ್ವದಲ್ಲಿಯೇ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಸೇವೆ ಅನನ್ಯ. ಸೈನಿಕ ವೃತ್ತಿಯ ಬಗ್ಗೆ ನಿರ್ಲಕ್ಷö್ಯ ವಹಿಸದೇ, ಯುವಕರು ದೇಶಸೇವೆ ಸಲ್ಲಿಸಲು ಸಿದ್ಧರಾಗಬೇಕು ಎಂದು ಕಾರ್ಗಿಲ್ ಯುದ್ಧ ಜರುಗಿದ ಮತ್ತು ಅದರಲ್ಲಿ ತಾವು ಸಲ್ಲಿಸಿದ ಸೇವೆಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಎಚ್.ಬಿ.ಪಾಟೀಲ, ಡಾ.ಸುನೀಲಕುಮಾರ ಎಚ್.ವಂಟಿ, ಅಸ್ಲಾಂ ಶೇಖ್, ಶಿವಯೋಗೆಪ್ಪಾ ಎಸ್.ಬಿರಾದಾರ, ಪೂಜಾ ಜಮಾದಾರ, ಐಶ್ವರ್ಯ ಬಿರಾದಾರ, ನಿಲೊಫರ್ ಶೇಖ್, ಸಮರ್ಥ, ಪ್ರವೀಣ, ಸಂಕೇತ, ರೋಹಿತ್, ಸಂಗಮೇಶ್, ಬಸವರಾಜ, ಶರಣು, ಲಕ್ಷಿö್ಮÃಕಾಂತ, ಬೀರಪ್ಪ ಹಾಗೂ ವಿದ್ಯಾರ್ಥಿಗಳಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago