ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಕೋಟ್ಯಾಂತರ ರೂಪಾಯಿ ಹಣವನ್ನು ಆ ಸಮಾಜದ ಏಳಿಗೆಗೆ ಬಳಸದೆ ದುರ್ಬಳಕೆಮಾಡಿಕೊಂಡಿರುವುದನ್ನು ವಿರೋಧಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು. ಎಸ್ಸಿ ಎ ಪಿ / ಟಿ ಎಸ್ ಪಿ ಯೋಜನೆಯ ಹಣ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಸರ್ಕಾರಕ್ಕೆ ಸೂಕ್ತನಿರ್ದೇಶನ ನೀಡಿ ನಿರ್ದಿಷ್ಟಯೋಜನೆಗೆ ಮಾತ್ರ ಈ ಹಣ ಬಳಕೆ ಮಾಡಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಪಕ್ಷದ ಜಿಲ್ಲಾ ಅಧ್ಯಕ್ಷ ಸುನೀಲ ಇಂಗನಕಲ್ಲ, ರಾಜ್ಯಕಾರ್ಯದರ್ಶಿ ಹುಚ್ಚೇಶ್ವರ ವಠಾರ್,ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಾಸು, ಜಿಲ್ಲಾ ಸಂಯೋಜಕರಾದ ಮೈಲಾರಿ ಶೆಳ್ಳಗಿ, ಶಿವಪುತ್ರ ಕೋಬಾಳಕರ, ಜಿಲ್ಲಾ ಉಪಾಧ್ಯಕ್ಷರಾದ ತಿಪ್ಪಣ್ಣ ಕಿನ್ನೂರ, ಭೀಮು ನೆಲೋಗಿ, ಶೋಭಾ ನಾಯಕ, ಪ್ರಧಾನ ಕಾರ್ಯದರ್ಶಿ ನಾಗೇಶ ಬೆಲಸೂರೆ, ವೈಜನಾಥ ಮಿತ್ರ, ರೇವಣಸಿದ್ದ ಶಿಂಧೆ, ಮಹ್ಮದ್ ಶಂಮಷೀರ್, ಸುನೀಲ ಕಟ್ಟಿಮನಿ, ಬಾಬು ಕೂಡಿ, ಭೀಮಾಶಂಕರ ಕೆ, ರಾಜಕುಮಾರ ಮುದುಗಲೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…