ಯಾದಗಿರಿ: ಕೃಷ್ಣಾ ನದಿಗೆ ಆಲಮಟ್ಟಿಗೆ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಸುಮಾರು 3 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡುತ್ತಿರುವುದರಿಂದ, ಯಾದಗಿರಿ ಜಿಲ್ಲೆಯ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆಗಳಿರುವುದರಿಂದ, ಸದರಿ ನದಿ ಪಾತ್ರದ ಗ್ರಾಮಗಳ ಜನರು ನದಿಗೆ ಇಳಿಯದಂತೆ ಹಾಗೂ ತಮ್ಮ ಜಾನುವಾರಗಳೊಂದಿಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಪ್ರವಾಹದ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.
ಈ ಕುರಿತು ಏನಾದರೂ ಸಮಸ್ಯೆ ಹಾಗೂ ದೂರುಗಳಿದ್ದಲ್ಲಿ, ಗ್ರಾಮಸ್ಥರು ಜಿಲ್ಲಾಡಳಿತ ಯಾದಗಿರಿ ಮತ್ತು ತಾಲೂಕು ಆಡಳಿತದ ವತಿಯಿಂದ ಸಾರ್ವಜನಿಕರಿಗೆ ಸ್ಪಂದಿಸಲು 24*7 ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಈ ಕೆಳಕಂಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಸೀಲ್ದಾರರ ಕಛೇರಿಗೆ ಕರೆ ಮಾಡಲು ಸಹಾಯವಾಣಿ ಆರಂಭಿಸಲಾಗಿದೆ.
ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿ ಸಹಾಯವಾಣಿ ಕೇಂದ್ರ 08473 253950 ಇದ್ದು, ತಾಲೂಕು ಮಟ್ಟದ ಸಹಾಯವಾಣಿ ಕೇಂದ್ರ ಯಾದಗಿರಿ ತಹಸೀಲ್ದಾರರ ಕಛೇರಿ 9901112994, 08473 253611, ಶಹಾಪೂರ ತಹಸೀಲ್ದಾರರ ಕಛೇರಿ 9448333545, 08479 243321, ಸುರಪುರ ತಹಸೀಲ್ದಾರರ ಕಛೇರಿ 9980265830, 08443 256043, ವಡಗೇರಾ ತಹಸೀಲ್ದಾರರ ಕಛೇರಿ 9449733123, 6360077481, ಹುಣಸಗಿ ತಹಸೀಲ್ದಾರರ ಕಛೇರಿ 9945103885, 9019132429 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
ಒಳ್ಳೆಯ ಮಾಹಿತಿ ಸರ್