ಚಿತ್ತಾಪುರ: ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಶರೀಫ್ ನಿಜಾಮುದ್ದಿನ್ (22) ಎಂಬ ಯುವಕನ ಶವ ಪತ್ತೆಯಾಗಿದೆ.
ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಗುರುವಾರ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೋದವನು ರಾತ್ರಿ 9 ಗಂಟೆಯಾದರೂ ಮರಳಿ ಬಾರದಿದ್ದಾಗ ಕುಟುಂಬದವರು ಹುಡುಕಾಟ ಶುರು ಮಾಡಿದ್ದಾರೆ. ರಾತ್ರಿ 11 ಗಂಟೆಗೆ ಕೆಸಿಎಲ್ ಕಂಪನಿ ಹತ್ತಿರದ ಪ್ರಗತಿ ಕಾಲೊನಿಯ ಪಕ್ಕದಲ್ಲಿ ಶರೀಫ್ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತನ ತಂದೆ ನಿಜಾಮುದ್ದಿನ್ ಅವರು ತನ್ನ ಮಗನ ಸಾವಿನ ಬಗ್ಗೆ ಸಂಶಯ ಇದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…