ಕಲಬುರಗಿ: ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆಯ ವಿವಿಧ ಅನುದಾನದಡಿ ಸುಮಾರು 6.68 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾದ 11 ವಾಹನಗಳನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿ ಪಾಲಿಕೆಗೆ ಹಸ್ತಾಂತರಿಸಿದರು.
ಕಲಬುರಗಿ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಎಸ್.ಬಿ.ಎಂ-1.0 ಯೋಜನೆಯಡಿ ಗಾರ್ಬೇಜ್ ಸಕ್ಕರ್- 1 ವಾಹನ, ಎನ್.ಸಿ.ಎ.ಪಿ ಯೋಜನೆಯಡಿ ಕಾಂಪ್ಯಾಕ್ಟರ್-5, ಲೈಟ್ ವ್ಯಾಕ್ಯೂಮ್ ರೋಡ್ ಸ್ವೀಪಿಂಗ್ ಮಶೀನ್-3, ಸೂಪರ್ ಸಕ್ಕರ್-1 ಹಾಗೂ ಸ್ವೀಪಿಂಗ್ ಮಶೀನ್-1 ಸೇರಿದಂತೆ ಒಟ್ಟಾರೆ 6.68 ಕೋಟಿ ರೂ. ಮೊತ್ತದಲ್ಲಿ 11 ವಾಹನಗಳನ್ನು ಖರೀದಿಸಿದ್ದು, ಇದರಿಂದ ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ಕೆ ಬಲ ಬರಲಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ನೀತಿ ಮತ್ತು ಕಾರ್ಯಕ್ರಮ ಸಲಹೆಗಾರರಾಗಿರುವ ಬಿ.ಆರ್.ಪಾಟೀಲ, ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಯಮತದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಐ.ಜಿ.ಪಿ. ಅಜಯ್ ಹಿಲೋರಿ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ, ಉಪ ಆಯುಕ್ತ ಆರ್.ಪಿ.ಜಾಧವ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ, ಪರಿಸರ ಅಭಿಯಂತರರಾದ ಸುಷ್ಮಾ ಸಾಗರ ಸೇರಿದಂತೆ ಪಾಲಿಕೆ ಸದಸ್ಯರು, ಅನೇಕ ಅಧಿಕಾರಿಗಳಿದ್ದರು.