ಬಿಸಿ ಬಿಸಿ ಸುದ್ದಿ

ಪಾಲಿಕೆ ಘನತ್ಯಾಜ್ಯ ನಿರ್ವಹಣೆಗೆ 6.68 ಕೋಟಿ ರೂ. ವೆಚ್ಚದ ವಾಹನಗಳನ್ನು ಉದ್ಘಾಟಿಸಿದ ಸಚಿವ‌ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆಯ ವಿವಿಧ ಅನುದಾನದಡಿ ಸುಮಾರು 6.68 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾದ 11 ವಾಹನಗಳನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿ ಪಾಲಿಕೆಗೆ ಹಸ್ತಾಂತರಿಸಿದರು.

ಕಲಬುರಗಿ ಮಹಾನಗರ ಪಾಲಿಕೆಯ 2023-24ನೇ‌ ಸಾಲಿನ ಎಸ್.ಬಿ.ಎಂ-1.0 ಯೋಜನೆಯಡಿ ಗಾರ್ಬೇಜ್ ಸಕ್ಕರ್- 1 ವಾಹನ, ಎನ್.ಸಿ.ಎ.ಪಿ ಯೋಜನೆಯಡಿ ಕಾಂಪ್ಯಾಕ್ಟರ್-5, ಲೈಟ್ ವ್ಯಾಕ್ಯೂಮ್ ರೋಡ್ ಸ್ವೀಪಿಂಗ್ ಮಶೀನ್-3, ಸೂಪರ್‌ ಸಕ್ಕರ್-1 ಹಾಗೂ ಸ್ವೀಪಿಂಗ್‌ ಮಶೀನ್-1 ಸೇರಿದಂತೆ ಒಟ್ಟಾರೆ 6.68 ಕೋಟಿ ರೂ. ಮೊತ್ತದಲ್ಲಿ 11 ವಾಹನಗಳನ್ನು ಖರೀದಿಸಿದ್ದು, ಇದರಿಂದ ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ಕೆ ಬಲ ಬರಲಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ನೀತಿ ಮತ್ತು ಕಾರ್ಯಕ್ರಮ ಸಲಹೆಗಾರರಾಗಿರುವ ಬಿ.ಆರ್.ಪಾಟೀಲ, ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಯಮತದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಐ.ಜಿ.ಪಿ. ಅಜಯ್ ಹಿಲೋರಿ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ, ಉಪ ಆಯುಕ್ತ ಆರ್.ಪಿ.ಜಾಧವ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ, ಪರಿಸರ ಅಭಿಯಂತರರಾದ ಸುಷ್ಮಾ ಸಾಗರ ಸೇರಿದಂತೆ ಪಾಲಿಕೆ ಸದಸ್ಯರು, ಅನೇಕ‌ ಅಧಿಕಾರಿಗಳಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago