ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಗರದ ಎಪಿಎಂಸಿ ಆವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಸಾವಯವ ಕೃಷಿ ಜಾತ್ರೆಗೆ ಕನೇರಿ ಸಿದ್ಧಗಿರಿ ಮಹಾಸಂಸ್ಥಾನದ ಕಾಡಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಮುತ್ಯಾನ ಬಬಲಾದ ಮಠದ ಗುರುಪಾದಲಿಂಗ ಮಹಾಶಿವಯೋಗಿಗಳು, ಬೆಳಗುಂಪಾದ ಅಭಿನವ ಪರುತೇಶ್ವರ ಶಿವಾಚಾರ್ಯರು, ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ.ಅಜಯ್ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ನೀಲಕಂಠರಾವ ಮುಲಗೆ, ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ, ಕಾರ್ಯದರ್ಶಿ ಮಂಜುನಾಥ ಜೇವರ್ಗಿ, ಕೃಷಿ ಉಪ ಸಮಿತಿ ಸಭಾಧ್ಯಕ್ಷ ಜಗದೀಶ ಗಾಜರೆ ಸೇರಿದಂತೆ ಮತ್ತಿತರರು ಇದ್ದರು.