ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸುವಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ತಮ್ಮ ಪಾಲಕರನ್ನು ವೃದ್ಧಾಶ್ರಮಕ್ಕೆ ಕಳಿಸಬೇಡಿ ಎಂದು ನಿವೃತ್ತ ಮುಖ್ಯ ಶಿಕ್ಷಕ, ಸಮಾಜ ಸೇವಕ ಬಸಯ್ಯಸ್ವಾಮಿ ಹೊದಲೂರ ಹೇಳಿದರು.
ನಗರದ ಆಳಂದ ಮುಖ್ಯ ರಸ್ತೆಯ ರಾಣೆಸ್ಪೀರ್ ದರ್ಗಾ ರಸ್ತೆಯಲ್ಲಿರುವ ‘ನೆಮ್ಮದಿ ವೃದ್ಧಾಶ್ರಮ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಜರುಗಿದ ‘ರಾಷ್ಟಿçÃಯ ಪಾಲಕರ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.
ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಮಾತನಾಡಿ, ತನಗಾಗಿ ಏನನ್ನು ಪ್ರಾರ್ಥಿಸದ ತಾಯಿ, ತನಗಾಗಿ ಏನನ್ನು ಮಾಡಿಕೊಳ್ಳದ ತಂದೆ, ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಗಲು-ರಾತ್ರಿಯೆನ್ನದೆ ಶ್ರಮಿಸುವ ಮುಗ್ದ ಜೀವಿಗಳು. ಮಗುವಿಗೆ ಶಿಕ್ಷಣ, ಸಂಸ್ಕಾರ, ಬುದ್ಧಿಯನ್ನು ನೀಡಿ, ವ್ಯಕ್ತಿಯನ್ನು ಶಕ್ತಿಯನ್ನಾಗಿಸುವಲ್ಲಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಾರೆ. ಮಕ್ಕಳು ತಮ್ಮ ಪಾಲಕರ ಮಾತುಗಳನ್ನು ಆಲಿಸಿ, ಮುನ್ನೆಡೆಯಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಸಕ್ಸಸ್ ಕಂಪ್ಯೂಟರ ಸಂಸ್ಥೆಯ ಮುಖ್ಯಸ್ಥ ಅಸ್ಲಾಂ ಶೇಖ್, ವೃದ್ಧಾಶ್ರಮದ ವ್ಯವಸ್ಥಾಪಕಿ ಬಸಮ್ಮ ಕೆ.ಸ್ಥಾವರಮಠ, ಸಮಾಜ ಸೇವಕಿ ವಿಜಯಲಕ್ಷಿö್ಮÃ ಗೋಗಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…