ಕಲಬುರಗಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿAದ ಒಂದಲ್ಲ ಒಂದು ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಕೋಟಿ ಕೋಟಿ ಹಣವನ್ನು ಲೂಟಿ ಹೊಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಮಾಜಿ ಸಂಸದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
ಭಾನುವಾರ ನಗರದ ಹೊರವಲಯದ ನಾಗನಹಳ್ಳಿ ರಸ್ತೆಯಲ್ಲಿನ ಭಾರತೀಯ ಜನತಾ ಪಕ್ಷದ ನೂತನ ಕಚೇರಿಯಲ್ಲಿ ಬಿಜೆಪಿ ನಗರ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೦ ಕೋಟಿ ಹಗರಣ, ಮೈಸೂರಿನ ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಪಕ್ಷ ಬರೀ ಲೂಟಿ ಮಾಡುವುದಲ್ಲಿ ಮುಳುಗಿದ್ದು,ಜನರ ನಂಬಿಕೆಗಳ ಜೊತೆಗೆ ಆಟವಾಡುತ್ತಾ ಹೊರಟಿದೆ ಎಂದರು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಗರಣಗಳಿಂದ ರಾಜ್ಯದ ಮಾನ ಮರ್ಯಾದೆ ಹಳ್ಳ ಹಿಡಿದಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಹಗರಣಗಳ ಪಟ್ಟಿ ಮಾಡಿ ಹೋರಾಟ ಮಾಡಲಾಗುವುದು. ಬರುವಂತಹ ದಿನಗಳಲ್ಲಿ ಎದುರಾಗುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟನಾತ್ಮಕವಾಗಿ ಗಟ್ಟಿಗೊಳಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಬೀದರ ಶಾಸಕ ಶೈಲೆಂದ್ರ ಬೆಲ್ದಾಳೆ, ಮಾಜಿ ಶಾಸಕ ಸುಭಾಷ ಗುತ್ತೆದಾರ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್ ಮಾತನಾಡಿದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ, ಯುವ ಮುಖಂಡ ಹರ್ಷಾನಂದ ಗುತ್ತೆದಾರ, ನಿತೀನ್ ಗುತ್ತೆದಾರ. ಹಿಂದೂಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಮಾಧ್ಯಮ ವಕ್ತಾರ ಸಂತೋಷ್ ಹಾದಿಮನಿ ಸೇರಿದಂತೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ತಳಮಟ್ಟದಲ್ಲಿ ಬಲಿಷ್ಠ ಮಾಡುವುದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಮುಂದುವರೆಯಲಿದೆ.- ಚAದು ಪಾಟೀಲ್., ನಗರಾಧ್ಯಕ್ಷ. ಬಿಜೆಪಿ ಮಹಾನಗರ ಘಟಕ ಕಲಬುರಗಿ