ಕಲಬುರುಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲು ಸಹ ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ ನಿಲ್ಲುತ್ತಿಲ್ಲ.ಅದನ್ನು ಮೆಟ್ಟಿ ನಿಲ್ಲಬೇಕು. ,ಶಿಕ್ಷಣ ಎಂಬ ಹಾಲನ್ನು ಕುಡಿಯಿರಿ,ನಂತರ ತಾವೆ ಘರ್ಜಿಸುತ್ತಿರಿ ಎಂದು ಕರೆ ನೀಡಿ,ಮಹಿಳೆ ಅಬಲೆ ಅಲ್ಲ ಎಂಬುವುದು ಸಾಬಿತು ಪಡಿಸಲು ಎಲ್ಲರೂ ಕಡ್ಡಾಯವಾಗಿ ಓದಿ ಎಂದು ವಿಧ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಕರೆ ನೀಡಿದರು.
ಪಟ್ಟಣದಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿನಿಯರ ಜೊತೆ ಸಂವಾದ ನಡೆಸಿ ಮಾತನಾಡಿದರು. ವಿಧ್ಯಾರ್ಥಿನಿಯರು ತಮ್ಮ ಸಮಸ್ಯೆಗಳ ಕುರಿತು ಸಕಾರಾತ್ಮಕವಾಗಿ ಮಾತನಾಡಿದ ಚೌದರಿರವರು,ತತಕ್ಷಣವೇ,ಸಂಭಂದಿಸಿದ ಅಧಿಕಾರಿಗಳನ್ನು ಕರೆಯಿಸಿ ತರಾಟೆಗೆ ತೆಗೆದುಕೊಂಡರು.
ನಂತರ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹೆಣ್ಣುಮಕ್ಕಳ ಹಕ್ಕುಗಳ ಕುರಿತು ಜಾಗೃತ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಸೂಚಿಸಿದರು. ಯಾವುದೇ ಕಾರಣಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಆಡಳಿತಕ್ಕೆ ಎಚ್ಚರಿಸಿದರು.
ಪಿಯು ಉಪ ನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಮಾತನಾಡಿ, ಕಾಲೇಜಿಗೆ ಶೌಚಾಲಯ ಇದೆ.ಆದರೆ ಐದಾರು ನೂರು ವಿಧ್ಯಾರ್ಥಿನಿಯರಿಗೆ ಇನ್ನೂ ಶೌಚಾಲಯಗಳ ಕೊರತೆ ಇರುವ ಕುರಿತು ಸಂಭಂದಿಸಿದ ಇಲಾಖೆಯ ಮುಖ್ಯಸ್ಥರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಬಾಲಕೀಯರ ಮತ್ತು ಮಹಿಳೆಯರಿಗೆ ಸಂಭಂದಿಸಿದ ಸಮಸ್ಯೆಗಳ ಕುರಿತು, ಮತ್ತು ಸೌಕರ್ಯಗಳ ಬಗ್ಗೆ ಇಲಾಖೆಯಿಂದ ಇರುವ ಮಾಹಿತಿಗಳ ಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಿಲ್ಲಾಧಿಕಾರಿ ರಾಜಕುಮಾರ ರಾಠೋಡ ತಿಳಿಸಿದರು
ನಂತರ ಮಂದೇವಾಲ ಗ್ರಾಮದಲ್ಲಿ ಆರೋಗ್ಯ ಶಿಬಿರ ಉದ್ಘಾಟಿಸಿ, ಮಾತನಾಡಿದ ಅವರು, ರೋಗಿಗಳ ಸಮಸ್ಯೆಗಳನ್ನು ಆಲಿಸಿ, ಆಸ್ಪತ್ರೆಯನ್ನು ಪರಿಶಿಸಿದರು.ಆಸ್ಪತ್ರೆಯ ಅಚ್ಚುಕಟ್ಟಾದ ವ್ಯವಸ್ಥೆಗೆ ಡಾ.ನಾಗಲಕ್ಷ್ಮೀ ಚೌದರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂದೇವಾಲ ಗ್ರಾಮಸ್ಥರು ನಗು ಮಗು ಅಂಬುಲೇನ್ಸ ಒದಗಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಮಲ್ಲಣ್ಣ ಯಲಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಕುಮಾರ ರಾಠೋಡ, ಪಪೂ ಉಪ ನಿರ್ದೇಶಕ ಶಿವಶರಣಪ್ಪ ಮೂಳೆಗಾಂವ,ತಾಲ್ಲೂಕು ವೈದ್ಯಾಧಿಕಾರಿ ಡಾ.ಸಿದ್ದು ಪಾಟೀಲ್, ತಾಪಂ ಇಓ ರೇವಣಸಿದ್ದಪ್ಪ ಗೌಡರ,ಸಿಪಿಐ ರಾಜೆಸಾಬ ನಧಾಫ,ಪಿಎಸ್ ಐ ಸುರೇಶಕುಮಾರ ಚವ್ಹಾಣ, ಅಶೋಕ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಇದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…