ಶಹಾಬಾದ: ಈ ದೇಶ ಕಂಡ ಭಾರತ ಸ್ವಾತಂತ್ರö್ಯ ಹೋರಾಟಗಾರರಲ್ಲಿ ಅಪ್ರತಿಮ ಹೋರಾಟಗಾರ ಚಂದ್ರಶೇಖರ ಆಜಾದ್ ಎಂದುಪ್ರಗತಿಪರ ಹೋರಾಟಗಾರ ಜಗನ್ನಾಥ.ಎಸ್.ಹೆಚ್ ಹೇಳಿದರು.
ಅವರು ಚಂದ್ರಶೇಖರ ಆಜಾದ್ ಅವರ ಜನ್ಮ ದಿನಾಚರಣೆಯ ನಿಮಿತ್ತ ನಗರದ ಚಂದ್ರಶೇಖರ ಆಜಾದ್ ವೃತ್ತದಲ್ಲಿ ಚಂದ್ರಶೇಖರ ಆಜಾದ್ ಅಭಿಮಾನಿಗಳ ಸಂಘದಿAದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬ್ರಿಟಿಷರಿಗೆ ಹಗಲಿರುಳು ಸಿಂಹಸ್ವಪ್ನವಾಗಿ ಕಾಡಿದರು.ಭಾರತ ಮಾತೆಯನ್ನು ಬಂಧಮುಕ್ತಳನ್ನಾಗಿ ಮಾಡಬೇಕೆಂದು ಪಣ ತೊಟ್ಟಿದ್ದರು. ಅದಕ್ಕಾಗಿ ಭಾರತ ಸ್ವಾತಂತ್ರö್ಯ ಸಂಗ್ರಾಮದಲ್ಲಿ ತನ್ನದೇ ಆದ ಪ್ರಭುತ್ವ ಸ್ಥಾಪಿಸಿದ ವೀರ.ಕ್ರಾಂತಿಯಿAದಲೇ ಈ ದೇಶಕ್ಕೆ ಸ್ವಾತಂತ್ರö್ಯ ದೊರಕಬೇಕು ಎಂಬುದು ಇವರ ಆಶಯವಾಗಿತ್ತು ಎಂದು ಹೇಳಿದರು.
ಶಿವಾನಂದ ಪಾಟೀಲ ಮಾತನಾಡಿ, ದೇಶದ ಸ್ವಾತಂತ್ರö್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ನಾಯಕ ಆಜಾದ್. ಅವರ ದೇಶದ ಮೇಲಿಟ್ಟಿರುವ ಅಭಿಮಾನ, ಪ್ರೀತಿ ಹಾಗೂ ಆದರ್ಶಗಳನ್ನು ನಾವು ಸಹ ಅಳವಡಿಸಿಕೊಂಡರೆ ದೇಶದ ಪರಿವರ್ತನೆ ನಮ್ಮಿಂದಲೇ ಪ್ರಾರಂಭವಾಗುತ್ತದೆ.ಆದ್ದರಿAದ ಇಂತಹ ದಾರಿಯಲ್ಲಿ ನಾವು ನಡೆಯಬೇಕಿದೆ ಎಂದರು.
ಬಸವರಾಜ ಸಾತ್ಯಾಳ, ಡಾ.ಅಶೋಕ ಜಿಂಗಾಡೆ, ಮಹಾವೀರ ಸುಗಂಧಿ, ದೇವೆಂದ್ರಪ್ಪ ಯಲಗೋಡಕರ್, ಅಂಬ್ರೇಶ ಸಾತ್ಯಾಳ, ರಮೇಶ ದೇವಕರ್, ಸುಹಾಸ ಅವರಾದಿ, ಶಿವಾಜಿ ಪವಾರ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…