ಬಿಸಿ ಬಿಸಿ ಸುದ್ದಿ

ಪತ್ರಕರ್ತರ ಸಮಸ್ಯೆ ಸರ್ಕಾರದ ಗಮನಕ್ಕೆ ತರುವೆ: ಸಿಎಂ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ ಭರವಸೆ

ಕಲಬುರಗಿಯಲ್ಲಿ ನಡೆದ ಪತ್ರಿಕಾ ದಿನಾಚರಣೆ

ಕಲಬುರಗಿ: ಪತ್ರಕರ್ತರ ಸಮಸ್ಯೆ ಬಗ್ಗೆ ಸರಕಾರದ ಗಮನಕ್ಕೆ ತಂದು ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಅದಕ್ಕೆ ನೀತಿ ನಿಯಮಗಳು ಅಂತಿಮ ಆಗುತ್ತಿದ್ದಂತೆ ಶೀಘ್ರ ಕೊಡಲಾಗುವುದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಭರವಸೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ 2024ನೇ ಸಾಲಿನ ದಿ.ವಿ.ಎನ್.ಕಾಗಲಕರ್ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅನಾರೋಗ್ಯಕ್ಕೆ ಒಳಗಾದ ಪತ್ರಕರ್ತರ ಆರೋಗ್ಯ ಬಗ್ಗೆ ಗಮನಕೊಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ 10 ಕೋಟಿ ರೂ. ಮೀಸಲು ಇಡಲಾಗಿದೆ ಎಂದು ಹೇಳಿದರು.

ಮಾಧ್ಯಮ ಸಮಾಜ ಮತ್ತು ಸರಕಾರದ ನಡುವಿನ ಸೇತುವೆಯಾಗಿ ಕೆಲಸ ಮಾಡಬೇಕಿದೆ. ಆದರಿಂದು ಸರಕಾರದ ಕಿವಿ ಹಿಂಡುವ ಬದಲು ಕೇವಲ ವ್ಯಕ್ತಿಗತ ಸುದ್ದಿ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು. ಮಧ್ಯಮ ವರ್ಗ ಮತ್ತು ಬಡತನದಿಂದ ಬಂದ ಪತ್ರಕರ್ತರು ಮೂಲ ಸಮಸ್ಯೆಗಳನ್ನು ಎತ್ತಿ ತೋರಿಸುವುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪ್ರಭುಪಾಟೀಲ್, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಮಾಜಿ ಸಂಸದ ಡಾ.ಉಮೇಶ್ ಜಾಧವ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗಿರೀಶ್ ಕೋಟಿ, ವಾರ್ತಾ ಇಲಾಖೆ ಉಪ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಮಾಲಿಬಿರಾದಾರ್ ಇತರರಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು, ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿದರು.

ಪತ್ರಕರ್ತರ ಯೋಗ ಕ್ಷೇಮೆ ಸೇರಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್ ನೀಡುವುದಾಗಿ ಸರಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಅದನ್ನು ತಕ್ಷಣವೇ ಜಾರಿಗೊಳಿಸಬೇಕು. ಅಲ್ಲದೆ, ನಿವೃತ್ತ ಪತ್ರಕರ್ತರಿಗೆ ಪಿಂಚಣಿ ನೀಡುವ ನಿಯಮ ಸರಳೀಕರಣ ಮಾಡಿ ಸಂಧ್ಯಾಕಾಲದಲ್ಲಿ ಇರುವ ಪತ್ರಕರ್ತರಿಗೆ ನೆರವಾಗಬೇಕು. ಬಡ ಪತ್ರಕರ್ತರಿಗೆ ನಿವೇಶನ ನೀಡುವ ಬಗ್ಗೆಯೂ ಸರಕಾರದ ಗಮನಕ್ಕೆ ತರಬೇಕು. – ಶಿವಾನಂದ ತಗಡೂರ, ರಾಜ್ಯಾಧ್ಯಕ್ಷರು, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು

ಕಾಗಲಕರ್ ಪರಂಜನ ಸತ್ಯಂಪೇಟೆ, ಶಾಮಕುಮಾರ ಶಿಂದೆ, ಬಿ.ವಿ. ಚಕ್ರವರ್ತಿ, ಮಲ್ಲಿಕಾರ್ಜುನ ನೈಯ್ಕೋಡಿ ಅವರಿಗೆ ತಲಾ ಐದು ಸಾವಿರ ರೂ. ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿದ್ಯುನ್ಮಾನ ವಿಶೇಷ ಪ್ರಶಸ್ತಿಯನ್ನು ರಾಜಶೇಖರಯ್ಯ ಸ್ವಾಮಿ ಹೊಕ್ರಾಣಿಮಠ ಅವರಿಗೆ ನೀಡಿ ಗೌರವಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago