ಸುರಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಸುರಪುರ ತಾಲೂಕ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಇದೇ ಜುಲೈ ೩೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕ ಅಧ್ಯಕ್ಷ ಸಿದ್ದಯ್ಯ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿ,ಜುಲೈ ೩೧ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ತಾಲೂಕ ಪಂಚಾಯತ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ಕಾರ್ಯಕ್ರಮದ ಸಾನಿಧ್ಯವನ್ನು ಕಡ್ಲೆಪ್ಪನವರ ನಿಷ್ಠಿ ವಿರಕ್ತ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ ಸಾನೀಧ್ಯವಹಿಸಲಿದ್ದು,ಶಾಸಕ ರಾಜಾ ವೇಣುಗೋಪಾಲ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ ಅಧ್ಯಕ್ಷತೆ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ತಹಸಿಲ್ದಾರ್ ಕೆ.ವಿಜಯಕುಮಾರ,ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ,ತಾ.ಪಂ ಇಓ ಬಸವರಾಜ ಸಜ್ಜನ್,ಡಿವೈಎಸ್ಪಿ ಜಾವಿದ್ ಇನಾಂದಾರ್,ಟಿಹೆಚ್‌ಓ ಡಾ.ಆರ್.ವಿ ನಾಯಕ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಸಂಘದ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ ಹಾಗೂ ಸಂಘದ ಜಿಲ್ಲಾಧ್ಯಕ್ಷ ಗುಂಡಾಭಟ್ಟ ಜೋಷಿ ಭಾಗವಹಿಸಲಿದ್ದಾರೆ.
ಅಲ್ಲದೆ ದಿ.ಶ್ರೀಮತಿ ಸುನೀತಾ ಹೊನ್ನಪ್ಪ ತೇಲ್ಕರ್ ಅವರ ಸ್ಮರ್ಣಾರ್ಥವಾಗಿ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು,ಹಿರಿಯ ವರದಿಗಾರ ಮಲ್ಲು ಗುಳಗಿ,ಭೀಮಾ ತೀರ ಪತ್ರಿಕೆ ಸಂಪಾದಕ ಮಹಾದೇವಪ್ಪ ಕಟ್ಟಿಮನಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ವಿಶೇಷವಾಗಿ ಇದುವರೆಗೆ ಸಂಘದ ತಾಲೂಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹಿರಿಯ ವರದಿಗಾರರಾದ ಅಶೋಕ ಸಾಲವಾಡಗಿ,ಧೀರೇಂದ್ರ ಕುಲಕರ್ಣಿ,ಮಲ್ಲು ಗುಳಗಿ,ಗಿರೀಶ ಶಾಬಾದಿ ಹಾಗೂ ಪವನ ಕುಲಕರ್ಣಿ ಅವರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿ,ಎಲ್ಲಾ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…