ಸುರಪುರ:ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಇಲ್ಲದೆ ಕೂಲಿಕಾರರ ಪರದಾಡುವಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ದವಲಸಾಬ್ ನದಾಫ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲೂಕ ಪಂಚಾಯತಿ ಮುಂದೆ ಸಂಘಟನೆಯಿAದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಅನೇಕ ಗ್ರಾಮ ಪಂಚಾಯತಿಗಳಲ್ಲಿ ಈ ವರ್ಷ ಕೇವಲ ೧೦ ರಿಂದ ೧೫ ದಿನಗಳು ಮಾತ್ರ ಉದ್ಯೋಗ ಖಾತ್ರಿ ಕೆಲಸ ನೀಡಿದ್ದು,ಕೆಲಸಕ್ಕಾಗಿ ಫಾರಂ ನಂಬರ್ ೬ ಸಲ್ಲಿಸಲು ಹೋದರೆ ಈ ವರ್ಷ ಜಿಲ್ಲಾ ಪಂಚಾಯತಿಯಿAದ ಕ್ರೀಯಾಯೋಜನೆಗೆ ಮಂಜೂರಾತಿ ಕೊಟ್ಟಿಲ್ಲ ಬಂದ ನಂತರ ಕೆಲಸ ಕೊಡಲಾಗುವುದು ಎಂದು ಹೇಳುತ್ತಾರೆ.ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳು ಕೂಡಲೇ ಎಲ್ಲಾ ಕೂಲಿಕಾರರಿಗೆ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಕಚಕನೂರ,ಆಲ್ದಾಳ,ಖಾನಾಪುರ ಎಸ್.ಹೆಚ್,ತಿಂಥಣಿ,ಪೇಠ ಅಮ್ಮಾಪುರ, ಯಕ್ತಾಪುರ, ಸೂಗೂರ,ಏವೂರ,ದೇವಾಪುರ,ಹೆಗ್ಗನದೊಡ್ಡಿ,ದೇವತ್ಕಲ್,ಕರಡಕಲ್ ಗ್ರಾಮ ಪಂಚಾಯತಿ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಬರೆದ ಮನವಿ ತಾಲೂಕ ಪಂಚಾಯತಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಪ್ರಕಾಶ ಆಲ್ಹಾಳ,ಜಿಲ್ಲಾ ಕಾರ್ಯದರ್ಶಿ ಅಯ್ಯಪ್ಪ ಅನಸೂರ,ಖಾಜಾಸಾಬ ದಳಪತಿ,ವಿರೇಶ ಪಾಳೇರ,ಮಲ್ಲೇಶಿ ಸೋಬಾನ,ಈಶಮ್ಮ ಶೆಳ್ಳಗಿ,ಬಸವರಾಜ ಏವೂರ,ಸಿದ್ದಮ್ಮ ಬೋನ್ಹಾಳ,ಹಣಮಂತ್ರಾಯ ಚಂದಲಾಪುರ,ಪ್ರಕಾಶ,ಬಸವರಾಜ ಶಾಂತಪೂರ ಸೇರಿದಂತೆ ಅನೇಕ ಜನ ಕೂಲಿಕಾರರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…