ಕಲಬುರಗಿ: ಇಲ್ಲಿನ ಕಲಬುರಗಿ ಮಹಾನಗರ ಪಾಲಿಕೆಯ ೨೨ನೇ ಮೇಯರ್ ಆಗಿ ಯಲ್ಲಪ್ಪ ನಾಯ್ಕೋಡಿ, ಉಪ ಮೇಯರ್ ಹೀನಾಬೇಗಂ ಅಬ್ದುಲ್ ರಹೀಂ ಅವಿರೋಧ ಆಯ್ಕೆಯಾಗಿರೋದಕ್ಕೆ ಕೆಕೆಆರ್‌ಡಿಬಿ ಅದ್ಯಕ್ಷರು, ಜೇರ‍್ಗಿ ಶಾಸಕರೂ ಆಗಿರುವ ಡಾ. ಅಜಯ್ ರ‍್ಮಸಿಂಗ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದ ಅಧಿಕಾರ ಪಾಲಿಕೆಯಲ್ಲಿ ಬರುವುದರ ಜೊತೆಗೇ ಬಿಜೆಪಿಯ ಅಭಿವೃದ್ಧಿ ವಿರೋಧಿ ಆಳಿತ ಅಂತ್ಯ ಕಂಡಿದೆ. ಕಲಬುರಗಿ ನಗರದಲ್ಲಿ ಇನ್ಮುಂದೆ ಅಭಿವೃದ್ಧಿಗೆ ಹೊಸ ವೇಗ ದೊರಕಲಿದೆ ಎಂದು ಡಾ. ಅಜಯ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಮೂಲ ಸವಲತ್ತು ವಿಚಾರಗಳು, ಸಂಚಾರ ಸಮಸ್ಯೆ ನಿವಾರಣೆ ಸೇರಿದಂತೆ ಹಲವು ಸವಲತ್ತುಗಳನ್ನು ನಗರದಲ್ಲಿ ಕಲ್ಪಿಸಬೇಕಿದೆ. ಈ ವಿಚಾರದಲ್ಲಿ ಪಾಲಿಕೆಯ ಆಡಳಿತ ಕೈಗೊಳ್ಳುವ ತರ‍್ಮಾನಗಳಿಗೆ ಕೆಕೆಆರ್‌ಡಿಬಿ ಬೆಂಬಲಿಸಲಿದೆ ನಗರಾಭಿವೃದ್ಧಿಗೆ ಮಂಡಳಿಯೂ ಪಾಲಿಕೆಯೊಂದಿಗೆ ಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈ ಜೋಡಿಸಲಿದೆ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಪಾಲಿಕೆಯಲ್ಲಿನ ಈ ಐತಿಹಾಸಿಕ ಗೆಲುವಿಗಾಗಿ ಕೈ ಜೋಡಿಸಿರುವಂತಹ ಎಲ್ಲಾ ಮುಖಂಡರಿಗೆ, ಪಾಲಿಕೆ ಸದಸ್ಯರಿಗೆ, ಪಕ್ಷದ ಹಿರಿಯರಿಗೆ, ಜನಪ್ರತಿನಿಧಿಗಳಿಗೆಲ್ಲರಿಗೂ ಡಾ. ಅಜಯ್ ರ‍್ಮಸಿಂಗ್ ಅಭಿನಂದಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…