ಬಿಸಿ ಬಿಸಿ ಸುದ್ದಿ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದವರು ಮಹಾಂತ ಶಿವಯೋಗಿಗಳು

ಶಹಾಬಾದ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರಾರಂಭಿಸಿದ ಮಹಾಂತ ಜೋಳಿಗೆ ಯೋಜನೆ ಡಾ. ಮಹಾಂತ ಶಿವಯೋಗಿಗಳÀ ಹೆಸರನ್ನು ಸರ್ಕಾರ ಗುರುತಿಸುವಂತೆ ಮಾಡಿದೆ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು.

ಅವರು ಗುರುವಾರ ನಗರದ ತಹಸೀಲ್ದಾರ ಕಚೇರಿಯಲ್ಲಿ ಮಹಾಂತ ಶಿವಯೋಗಿಗಳÀ ಜನ್ಮದಿನಾಚರಣೆ ನಿಮಿತ್ತ ಆಯೋಜಿಸಲಾದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅರಿವೆಯ ಚೀಲವನ್ನು ಹಿಡಿದು ಮನೆಯಿಂದ ಮನೆಗೆ ಹೋಗಿ ಕುಟುಂಬ- ಸಮಾಜ- ದೇಶವನ್ನೇ ಹಾಳು ಮಾಡುವ ದುವ್ರ್ಯಸನ ಹಾಗೂ ದುಷ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಜನರ ಎಲ್ಲಾ ದುಶ್ಚಟಗಳ ವಸ್ತುಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸಿದವರು ಡಾ. ಮಹಾಂತ ಶಿವಯೋಗಿ ಅವರು. ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು.ಅದರಂತೆ ನಾವು ನಮ್ಮ ಸುತ್ತಮುತ್ತಲಿನ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಶಿಕ್ಷಕ ಬನ್ನಪ್ಪ ಸೈದಾಪೂರ ಹಾಗೂ ಡಾ.ಶಂಕರ ರಾಠೋಡ ಮಾತನಾಡಿ, ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಿ, ಸಾವಿರಾರು ಮಂದಿಯನ್ನು ದುಶ್ಟಟಗಳಿಂದ ಮುಕ್ತ ಗೊಳಿಸಿದ್ದರು. ವ್ಯಸನ ಮುಕ್ತ ವ್ಯಕ್ತಿ, ಕುಟುಂಬ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ದೇಶದಾದ್ಯಂತ ಹಾಗೂ ವಿದೇಶದಲ್ಲೂ ಸಹ ಸಂಚರಿಸಿ ಜನರ ದುಶ್ಟಟಗಳನ್ನೇ ಭಿಕ್ಷೆಯ ರೂಪದಲ್ಲಿ ತಮ್ಮ ಜೋಳಿಗೆಯಲ್ಲಿ ಸಂಗ್ರಹಿಸಿ ದ್ದರು. ಅವರ ಜನ್ಮದಿನವನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ನಗರಸಭೆಯ ಪೌರಾಯುಕ್ತ ಡಾ. ಕೆ. ಗುರಲಿಂಗಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 hour ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

8 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

19 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

19 hours ago