ಬಿಸಿ ಬಿಸಿ ಸುದ್ದಿ

ಡಾ.ಮಹಾಂತ ಶಿವಯೋಗಿಗಳು ಜೋಳಿಗೆಯಲ್ಲಿ ದುಶ್ಚಟಗಳ ಬಿಕ್ಷೆ ಸಂಗ್ರಹಿಸಿದವರು

ಶಹಾಬಾದ: ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುಶ್ಚಟಗಳು, ದ್ರವ್ಯವಸನಿಗಳ ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭೀಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಲಿಂ. ಡಾ.ಮಹಾಂತ ಶಿವಯೋಗಿಗಳು ಎಂದು ನಗರಸಭೆಯ ಪೌರಾಯುಕ್ತ ಡಾ. ಕೆ. ಗುರಲಿಂಗಪ್ಪ ಹೇಳಿದರು.

ಅವರು ಗುರುವಾರ ನಗರಸಭೆಯ ಕಚೇರಿಯಲ್ಲಿ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಅಧುನಿಕ ಯುಗವು ಸಂಪೂರ್ಣ ಯುವಕರ ಮೇಲೆ ನಿಂತಿದೆ. ಅವರೇ ವ್ಯಸನಿ ಗಳಾದರೆ ದೇಶದ ಅಥ್ಯವ್ಯವಸ್ಥೆಗೆ ತೊಂದರೆ ಯಾಗಲಿದೆ. ಮಾದಕ ವಸ್ತುಗಳ ಮೇಲೆ ಹಾನಿಕಾರಕ ಎಂಬ ಮಾಹಿತಿ ಇದ್ದರೂ ಸಹಿತ ಅದರಿಂದ ಯುವಜನತೆ ದೂರವಾಗ ದಿರುವುದು ವಿμÁದನೀಯ ಸಂಗತಿ.ಇದರಿಂದ ದೇಶದಲ್ಲಿ ಅನೇಕ ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಹೇಳಿದ ಅವರು, ಸ್ವಚ್ಚಂದ ಸಮಾಜ ನಿರ್ಮಾಣಕ್ಕೆ ಯುವಕರು ಸನ್ನದ್ದರಾಗಬೇಕು ಎಂದು ಹೇಳಿದರು.

ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ ಮಾತನಾಡಿ, ಯುವ ಪೀಳಿಗೆಯ ದುಶ್ಚಟಗಳನ್ನು ಬಿಡಿಸಿ ಸದೃಡ ಸಮಾಜ ನಿರ್ಮಾಣಕ್ಕೆ ನಿರಂತರ ಹೋರಾಟ ಮಾಡಿದ ಡಾ. ಮಹಾಂತ ಶಿವಯೋಗಿಗಳ ಜಯಂತಿ ನಿಮಿತ್ಯ ಅ.1 ರಂದು ರಾಜ್ಯಾಧ್ಯಂತ ವ್ಯವಸನ ಮುಕ್ತ ದಿನಾಚರಣೆ ಆಚರಿಸಲಾಗುತ್ತಿದೆ. ಡಾ.ಮಹಾಂತ ಶಿವಯೊಗಿಗಳು ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವುದರ ಜೊತೆಗೆ ಜನ ಸಾಮಾನ್ಯರ ದುಶ್ಚಟಗಳನ್ನು ದೂರಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದು,ಇದರಿಂದ ಅನೇಕರು ತಮ್ಮ ದುಶ್ಚಟಗಳನ್ನು ಬಿಟ್ಟು ಉತ್ತಮ ಬದುಕನ್ನು ಸಾಗಿಸುತ್ತಿದ್ದಾರೆ. ಸಾರ್ವಜನಿಕರು,ಯುವಕರು ದುಶ್ಚಟಗಳನ್ನು ಬಿಟ್ಟು ಸುಂದರ ಸಮಾಜ ನಿರ್ಮಾಣಕ್ಕೆ ಕೈಜೊಡಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಗರಸಭೆಯ ರಘುನಾಥ ನರಸಾಳೆ, ಸುರೇಶ ಮೈಂದರ್ಗಿ, ನಾರಾಯಣ ರೆಡ್ಡಿ, ಸಾಯಬಣ್ಣ ಸುಂಗಲಕರ್, ಅಪ್ಸರ್,ಶಿವಾನಂದ ಜಮಗೊಂಡ,ಸಿದ್ದಯ್ಯಸ್ವಾಮಿ, ಮೈಹಿನೋದ್ದಿನ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

11 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago