ಸುರಪುರ: ನ್ಯಾಯವಾದಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಆಯ್ಕೆಯಾಗಿರುವ ನ್ಯಾಯವಾದಿ ಸಿ.ಎಸ್.ಮಾಲಿ ಪಾಟೀಲ್ ಅವರಿಗೆ ಯಾದಗಿರಿ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ಮತ್ತು ಸಂಘಟನೆಯ ಮುಖಂಡ ಮಹಾದೇವರಡ್ಡಿ ಖಾನಾಪುರ ಅವರು ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಹಾರೈಸಿದರು.